ಪ್ರವೀಣ್‌ ಅವ್ಯೂಕ್‌ ನಿರ್ದೇಶನದ ‘ಹಿರಣ್ಯ’ ಸಿನಿಮಾದ ತಾಯಿ ಪ್ರೀತಿ ವಿವರಿಸುವ ಹಾಡು ರಿಲೀಸ್‌ ಆಗಿದೆ. ಪ್ರಮೋದ್‌ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್‌ ಧ್ವನಿಯಾಗಿದ್ದು, ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದಾರೆ.

ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ತಾಯಿ ಪ್ರೀತಿ ವಿವರಿಸುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಾಜವರ್ಧನ್‌ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್‌ನಲ್ಲಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಹಿಂದೆ ಕಿರುಚಿತ್ರಗಳ ಮೂಲಕ ಗಮನ ಸೆಳೆದಿದ್ದ ಪ್ರವೀಣ್‌ ಅವ್ಯೂಕ್‌ ಅವರಿಗೆ ಇದು ಸ್ವತಂತ್ರ ನಿರ್ದೇಶನದ ಮೊದಲ ಸಿನಿಮಾ. ‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್‌ನಡಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ಚಿತ್ರ ನಿರ್ಮಿಸುತ್ತಿದ್ದಾರೆ. ಯೋಗೇಶ್ವರನ್‌ ಆರ್‌ ಛಾಯಾಗ್ರಹಣ ಮಾಡಿದ್ದಾರೆ. ಸದ್ಯ ಸಿನಿಮಾ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಜುಲೈ 19ಕ್ಕೆ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here