ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಬಹುನಿರೀಕ್ಷಿತ ಸಿನಿಮಾ ‘ದಿ ಗೋಟ್‌ ಲೈಫ್‌’ ಇದೇ ಮಾರ್ಚ್‌ 28ರಂದು ತೆರೆಕಾಣಲಿದೆ. ನಿರ್ದೇಶಕ ಬ್ಲೆಸ್ಸಿ ಅವರ ಹದಿನಾರು ವರ್ಷಗಳ ಕನಸಿನ ಚಿತ್ರವಿದು. ಕರ್ನಾಟಕದಲ್ಲಿ ಚಿತ್ರವನ್ನು ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡುತ್ತಿದೆ. ಮೂಲ ಮಲಯಾಳಂ ಸೇರಿದಂತೆ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ತೆರೆಕಾಣಲಿದೆ.

ಬ್ಲೆಸ್ಸಿ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ದಿ ಗೋಟ್‌ ಲೈಫ್‌’ ಇದೇ ಮಾರ್ಚ್‌ 28ಕ್ಕೆ ತೆರೆಕಾಣುತ್ತಿದೆ. ಪೃಥ್ವಿರಾಜ್‌ ಸುಕುಮಾರ್‌ ನಟನೆಯ ಇದು 2018ರಲ್ಲಿ ಶುರುವಾಗಿದ್ದ ಸಿನಿಮಾ. ಕೋವಿಡ್‌ನಿಂದಾಗಿ ಚಿತ್ರೀಕರಣ ಸ್ಥಗಿತಗೊಂಡಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬ್ಲೆಸ್ಸಿ ಅವರ ಹದಿನಾರು ವರ್ಷಗಳ ಕನಸಿನ ಚಿತ್ರವಿದು. ಕರ್ನಾಟಕದಲ್ಲಿ ಚಿತ್ರವನ್ನು ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡುತ್ತಿದೆ. ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರ್ ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್‌ನ ‘ಕೆಜಿಎಫ್’, ‘ಕಾಂತಾರ’ ಚಿತ್ರಗಳನ್ನು ಕೇರಳದಲ್ಲಿ ಪೃಥ್ವಿರಾಜ್ ಸುಕುಮಾರನ್ ಬಿಡುಗಡೆ ಮಾಡಿದ್ದರು. ಈಗ ಪೃಥ್ವಿರಾಜ್ ಅವರ ‘ದಿ ಗೋಟ್‌ ಲೈಫ್‌’ ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಬಿಡುಗಡೆ ಮಾಡುತ್ತಿದೆ.

ಬೆಂಗಳೂರಿನಲ್ಲಿ ಆಯೋಜನೆಗೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ನಟ ಪೃಥ್ವಿರಾಜ್‌ ಮಾತನಾಡಿ, ‘ನಿರ್ದೇಶಕ ಬ್ಲೆಸ್ಸಿ ಅವರು ‘ಗೋಟ್ ಲೈಫ್’ ಚಿತ್ರ ಮಾಡಬೇಕೆಂದುಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018ರಲ್ಲಿ. ಈ ಚಿತ್ರಕ್ಕಾಗಿ ಅವರ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ ‘ಆಡುಜೀವಿತಂ’ ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮರುಮುದ್ರಣಗೊಂಡಿದೆ. ನಜೀಬ್ ಎಂಬುವವರ ಜೀವನದ ನೈಜ ಕತೆ ಆಧರಿಸಿದ ಚಿತ್ರವಿದು’ ಎಂದರು. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಅವರ ಸಂಗೀತ ಚಿತ್ರಕ್ಕಿದೆ. ಇದೇ ಮಾರ್ಚ್ 28ರಂದು ಮೂಲ ಮಲಯಾಳಂ ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here