ಹೊಸತನದ ನಿರೂಪಣೆಯಿಂದ ಗಮನ ಸೆಳೆದಿದ್ದ ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಥಿಯೇಟರ್‌ನಲ್ಲಿ 50 ದಿನಗಳನ್ನು ಪೂರೈಸಿದೆ. ನಿತಿನ್‌ ಕೃಷ್ಣಮೂರ್ತಿ ನಿರ್ದೇಶನದ ಸಿನಿಮಾ ಇದೀಗ ZEE5ನಲ್ಲಿ ಸ್ಟ್ರೀಮ್‌ ಆಗುತ್ತಿದೆ.

ಯುವ ಪ್ರತಿಭಾವಂತರು ಸೇರಿ ಮಾಡಿದ್ದ ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದೆ. ಜುಲೈ 21ರಂದು ಬಿಡುಗಡೆಯಾಗಿದ್ದ ಚಿತ್ರ ನಿರೂಪಣೆ ಮತ್ತು ವಿಶಿಷ್ಟ ಕಥಾಹಂದರದಿಂದ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ವಿಶೇಷವಾಗಿ ಯುವ ಪ್ರೇಕ್ಷಕರು ಚಿತ್ರವನ್ನು ಮೆಚ್ಚಿ ನೋಡಿದ್ದರು. ನಿತಿನ್ ಕೃಷ್ಣಮೂರ್ತಿ ಚೊಚ್ಚಲ ನಿರ್ದೇಶನದ ಸಿನಿಮಾಗೆ ಇಡೀ ಸ್ಯಾಂಡಲ್‌ವುಡ್‌ ಸಪೋರ್ಟ್ ಕೊಟ್ಟಿತ್ತು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಫಸ್ಟ್ ಲುಕ್ ಪೋಸ್ಟರ್‌ ಬಿಡುಗಡೆಗೊಳಿಸಿ ಹಾರೈಸಿದ್ದರು. ರಿಷಬ್ ಶೆಟ್ಟಿ, ಶೈನ್ ಶೆಟ್ಟಿ, ಪವನ್ ಕುಮಾರ್ ಹಾಗೂ ರಮ್ಯಾ ಗೆಸ್ಟ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ‘ಹಾಸ್ಟೆಲ್‌ ಬಾಯ್ಸ್‌’ ಶೀರ್ಷಿಕೆಯಡಿ ಸಿನಿಮಾ ತೆಲುಗಿಗೆ ಡಬ್‌ ಆಗಿ ತೆರೆಕಂಡಿತ್ತು. ಐವತ್ತು ದಿನಗಳ ಪ್ರದರ್ಶನದ ನಂತರ ಇದೀಗ ಸಿನಿಮಾ ZEE5 ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಿದೆ. ವರುಣ್ ಗೌಡ, ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಪಿಕ್ಚರ್ಸ್‌ನಡಿ ಚಿತ್ರವನ್ನು ಪ್ರೆಸೆಂಟ್ ಮಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ.

Previous articleSIIMA 2023 | ‘ಚಾರ್ಲಿ’ ಅತ್ಯುತ್ತಮ ಸಿನಿಮಾ, ಯಶ್‌ ಅತ್ಯುತ್ತಮ ನಟ
Next article‘ಟಗರು ಪಲ್ಯ’ದ ‘ಸೂರ್ಯಕಾಂತಿ’ ಹಾಡು ಬಿಡುಗಡೆ | ರಾಜ್ಯೋತ್ಸವಕ್ಕೆ ಸಿನಿಮಾ ತೆರೆಗೆ

LEAVE A REPLY

Connect with

Please enter your comment!
Please enter your name here