ಚಂದ್ರಜಿತ್ ಬೆಳ್ಯಪ್ಪ ನಿರ್ದೇಶನದ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ‘ಹೇಳು ಗೆಳತಿ’ ವೀಡಿಯೋ ಸಾಂಗ್‌ ಬಿಡುಗಡೆಯಾಗಿದೆ. ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದು ಚರಣ್‌ ರಾಜ್‌ ಹಾಡಿದ್ದಾರೆ.

ವಿಹಾನ್‌, ಅಂಕಿತಾ ಅಮರ್‌ ಮತ್ತು ಮಯೂರಿ ನಟರಾಜ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ‘ಹೇಳು ಗೆಳತಿ’ ಮೆಲೊಡಿ ಸಾಂಗ್‌ ರಿಲೀಸ್‌ ಆಗಿದೆ. ಪರವಃ ಸ್ಟುಡಿಯೋಸ್ ಬ್ಯಾನರ್‌ನಡಿ ರಕ್ಷಿತ್‌ ಶೆಟ್ಟಿ ಮತ್ತು ಜಿ ಎಸ್‌ ಗುಪ್ತ ನಿರ್ಮಿಸುತ್ತಿರುವ ಚಿತ್ರವನ್ನು ಚಂದ್ರಜಿತ್‌ ಬೆಳ್ಯಪ್ಪ ನಿರ್ದೇಶಿಸಿದ್ದಾರೆ. ರೆಟ್ರೋ ಶೈಲಿಯಲ್ಲಿರುವ ‘ಹೇಳು ಗೆಳತಿ’ ಹಾಡು ಮಾಧುರ್ಯ ಮತ್ತು ಚೆಂದದ ಸಿನಿಮಾಟೋಗ್ರಫಿಯಿಂದಾಗಿ ಗಮನ ಸೆಳೆಯುತ್ತದೆ. ಹಾಡಿನಲ್ಲೇ ಒಂದು ಕತೆ ಹೇಳಿದ್ದಾರೆ ಗೀತೆ ರಚಿಸಿರುವ ನಾಗಾರ್ಜುನ ಶರ್ಮಾ. ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದು ಚರಣ್‌ ರಾಜ್‌ ಹಾಡಿದ್ದಾರೆ. ‘ಈ ಹಿಂದೆ ಬಿಡುಗಡೆ ಮಾಡಿದ್ದ ಚಿತ್ರದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಈ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎನ್ನುತ್ತಾರೆ ಚಿತ್ರದ ನಿರ್ದೇಶಕರು.ಪರವಃ ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಹಾಡು ಬಿಡುಗಡೆಯಾಗಿದೆ.

‘ಕಿರಿಕ್ ಪಾರ್ಟಿ’, ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳ್ಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ‘ಕಥಾಸಂಗಮ’ ಚಿತ್ರದ ನಿರ್ದೇಶಕರಲ್ಲೊಬ್ಬರು. ‘ಇಬ್ಬನಿ ತಬ್ಬಿದ ಇಳೆಯಲಿ’ ಅವರ ಸ್ವತಂತ್ರ ನಿರ್ದೇಶನದ ಮೊದಲ ಸಿನಿಮಾ. ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ಈ ಚಿತ್ರದ ಮೂಲಕ ನಟನೆಗೆ ಮರಳಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ ಭಟ್, ದಾಮಿನಿ ಧನರಾಜ್ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ಪಿನಾಕ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here