N1 ಕ್ರಿಕೆಟ್ ಅಕಾಡೆಮಿಯಿಂದ ಸಿನಿಮಾ ಕಲಾವಿದರ ಜೊತೆಗೆ ಮಾಧ್ಯಮದವರು, ವೈದ್ಯರು ಹಾಗೂ ವಕೀಲರಿಗೆ ಕ್ರಿಕೆಟ್ ಟೂರ್ನ್‌ಮೆಂಟ್‌ ಆಯೋಜನೆ ಮಾಡಲಾಗಿದೆ.

ಎನ್‌1 ಕ್ರಿಕೆಟ್ ಅಕಾಡೆಮಿ ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್ (ಟೆಲಿವಿಷನ್ ಪ್ರೀಮಿಯರ್ ಲೀಗ್) ಕ್ರಿಕೆಟ್ ಟೂರ್ನ್‌ಮೆಂಟ್‌ ನಡೆಸಿಕೊಂಡು ಬರುತ್ತಿದೆ. ಈಗ ಇದೇ ಅಕಾಡೆಮಿ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್ ಮುಗಿಸಿರುವ ಅಕಾಡೆಮಿಯ ಸೂತ್ರಧಾರ ಸುನಿಲ್ ಕುಮಾರ್ ಬಿ ಆರ್ ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನ್‌ಮೆಂಟ್‌ಗೆ ಚಾಲನೆ ಕೊಟ್ಟಿದ್ದಾರೆ.

ವೈದ್ಯರು, ವಕೀಲರು, ಸಿನಿಮಾ ನಟರು, ಕಿರುತೆರೆ ಕಲಾವಿದರು ಮಾಧ್ಯಮದವರೆಲ್ಲ ಸೇರಿ ಆಡಲಿರುವ ಕ್ರಿಕೆಟ್ ಟೂರ್ನ್‌ಮೆಂಟ್ ಇದಾಗಿದೆ. ಈ ಪಂದ್ಯಾವಳಿ ಆರಂಭಕ್ಕೂ ಮುನ್ನ ಲೋಗೋ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ಈ ಕಾರ್ಯಕ್ರಮ ನಡೆದಿದ್ದು, ನಟಿಯರಾದ ತನಿಷಾ ಕುಪ್ಪಂಡ, ಭವ್ಯಾ ಗೌಡ, ಎನ್‌1 ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಸುನಿಲ್ ಕುಮಾರ್ ಬಿ ಆರ್, ಟೈಟಲ್ ಸ್ಪಾನ್ಸರ್‌ ಎವಿಆರ್ ಗ್ರೂಪ್ಸ್ ವತಿಯಿಂದ ಶೈಲೇಶ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಟಿ ತನಿಷಾ ಕುಪ್ಪಂಡ ಮಾತನಾಡಿ, ‘N1 ಕ್ರಿಕೆಟ್ ಅಕಾಡೆಮಿ ವತಿಯಿಂದ ಹಲವು ಟೂರ್ನ್‌ಮೆಂಟ್ ಮಾಡುವ ಮೂಲಕ ಸುನಿಲ್ ಅವರು ಖ್ಯಾತಿ ಪಡೆದಿದ್ದಾರೆ. ನಾನು ಇದಕ್ಕೂ ಮುನ್ನ ಟಿಪಿಎಲ್ ಸೀಸನ್ ಒಂದರಲ್ಲಿ ಟೀಂ ಒಂದಕ್ಕೆ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದೆ. ಯಾವುದೇ ಪ್ರೊಫೆಷನ್ ಆಗಲಿ ಕ್ರಿಕೆಟ್ ಅಂದರೆ ಪ್ರಾಣ ಕೊಡುವವರು ಬಹಳಷ್ಟು ಜನ ಇದ್ದಾರೆ. IPT 12 ಈ ಟೂರ್ನ್‌ಮೆಂಟ್ ವಿಶೇಷತೆ ಏನೆಂದರೆ ಎಲ್ಲ ಕ್ರಿಕೆಟ್ ಪ್ರೇಮಿಗಳು ಇದರಲ್ಲಿ ಭಾಗಿಯಾಗಬಹುದು’ ಎಂದರು.

ಟೈಟಲ್ ಸ್ಪಾನ್ಸರ್ ಎವಿಆರ್ ಗ್ರೂಪ್ಸ್‌ನ ಕಡೆಯಿಂದ ಶೈಲೇಶ್ ಅವರು ಮಾತನಾಡಿ, ‘IPT12 ಕ್ರಿಕೆಟ್ ಟೂರ್ನ್‌ಮೆಂಟ್‌ನಲ್ಲಿ ಚೆನ್ನಾಗಿ ಆಡುವ ಎಲ್ಲರಿಗೂ ಬಹುಮಾನ ವಿತರಣೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. ಎವಿಆರ್ ಗ್ರೂಪ್ಸ್ ವತಿಯಿಂದ ಶೈಲೇಶ್, ಅಭಿಷೇಕ್ ಹಾಗೂ ಪ್ರಸನ್ನ IPT12 ಕ್ರಿಕೆಟ್ ಟೂರ್ನ್‌ಮೆಂಟ್‌ಗೆ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.

LEAVE A REPLY

Connect with

Please enter your comment!
Please enter your name here