ರೂಪೇಶ್‌ ಶೆಟ್ಟಿ ನಟನೆಯ ಸಿನಿಮಾಗೆ ‘ಅಧಿಪತ್ರ’ ಶೀರ್ಷಿಕೆ ನಿಗದಿಯಾಗಿದೆ. ಚಿತ್ರದ ನಾಯಕಿಯಾಗಿ ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಜಾಹ್ನವಿ ಆಯ್ಕೆಯಾಗಿದ್ದಾರೆ. ಚಯನ್‌ ಶೆಟ್ಟಿ ಚೊಚ್ಚಲ ನಿರ್ದೇಶನದ ಸಿನಿಮಾ ಆಗಸ್ಟ್‌ 23ರಂದು ಸೆಟ್ಟೇರಲಿದೆ.

ಬಿಗ್ ಬಾಸ್ ವಿನ್ನರ್, ರಾಕ್‌ಸ್ಟಾರ್‌ ಖ್ಯಾತಿಯ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ‘ಅಧಿಪತ್ರ’ ಶೀರ್ಷಿಕೆ ನಿಗದಿಯಾಗಿದೆ. ರೂಪೇಶ್ ಜನ್ಮದಿನದ ಅಂಗವಾಗಿ ಟೈಟಲ್ ರಿವೀಲ್ ಮಾಡಲಾಗಿತ್ತು. ಟೈಟಲ್ ಮೂಲಕವೇ ಸಿನಿಮಾ ಪ್ರಿಯರಿಗೆ ಕುತೂಹಲ ಮೂಡಿಸಿದ್ದ ಚಿತ್ರ ತಂಡ, ಇದೀಗ ಮತ್ತೊಂದು ಹೊಸ ಸಮಾಚಾರ ನೀಡಿದೆ. ಈ ಸಿನಿಮಾ ಮೂಲಕ ಜಾಹ್ನವಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಸುದ್ದಿವಾಹಿನಿಗಳಲ್ಲಿ ಬಹಳಷ್ಟು ಖ್ಯಾತಿ ಗಳಿಸಿದ್ದ ಜಾಹ್ನವಿ ಅವರು ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ತಮ್ಮ ಅಭಿನಯದ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಈಗ ‘ಅಧಿಪತ್ರ’ದಲ್ಲಿ ನಾಯಕಿಯಾಗಿ ರೂಪೇಶ್ ಶೆಟ್ಟಿಗೆ ಜೋಡಿಯಾಗಿ ನಟಿಸಲಿದ್ದಾರೆ.

ಈ ಹಿಂದೆ ಹಲವು ಸಿನಿಮಾಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಚಯನ್ ಶೆಟ್ಟಿ ‘ಅಧಿಪತ್ರ’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ. ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ‘ಅಧಿಪತ್ರ’ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದ ‘ಅಧಿಪತ್ರ’ ಸಿನಿಮಾವನ್ನು ಮಂಗಳೂರು, ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಉಳಿದ ತಾರಾಗಣ ಹಾಗೂ ತಾಂತ್ರಿಕ ಬಳಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ. ಇದೇ 23ರಂದು ಅಧಿಪತ್ರ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದೆ. ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ತುಳು ಸಿನಿಮಾ ‘ಸರ್ಕಸ್’ ತುಳುನಾಡಿನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು ಇದೀಗ ಅವರು ಸ್ಯಾಂಡಲ್‌ವುಡ್‌ನಲ್ಲಿ ಅದೃಷ್ಟಪರೀಕ್ಷೆಗೆ ಸಜ್ಜಾಗಿದ್ದಾರೆ.

Previous articleರಕ್ಷಿತ್‌ ಶೆಟ್ಟಿ ‘ಸಪ್ತಸಾಗರದಾಚೆ ಎಲ್ಲೋ’ ಟ್ರೈಲರ್‌ | ಸೆಪ್ಟೆಂಬರ್‌ 1ರಂದು Side – A ಬಿಡುಗಡೆ
Next articleಧನ್ವೀರ್‌ – ರೀಷ್ಮಾ ‘ವಾಮನ’ ಆಕ್ಷನ್‌ ಟೀಸರ್‌ | ಮೈಸೂರಿನಲ್ಲಿ ನಡೆದ ಕಾರ್ಯಕ್ರಮ

LEAVE A REPLY

Connect with

Please enter your comment!
Please enter your name here