ವಿಜಯ ರಾಘವೇಂದ್ರ ಮತ್ತು ತೇಜಸ್ವಿನಿ ಶೇಖರ್‌ ನಟನೆಯ ‘ಜೋಗ್‌ 101’ ಸಿನಿಮಾ ಇದೇ ಮಾರ್ಚ್‌ 7ರಂದು ತೆರೆಕಾಣುತ್ತಿದೆ. ಜೋಗ ಜಲಪಾತದ ಆಸುಪಾಸು ಬಹುಪಾಲು ಚಿತ್ರೀಕರಣ ನಡೆದಿರುವುದು ವಿಶೇಷ. ಸಿನಿಮಾಗೆ ಅವಿನಾಶ್‌ ಆರ್‌ ಬಸುತ್ಕರ್‌ ಸಂಗೀತ ಸಂಯೋಜಿಸಿದ್ದಾರೆ.

ವಿಜಯ್ ರಾಘವೇಂದ್ರ ನಟಿಸಿರುವ ‘ಜೋಗ್ 101’ ಚಿತ್ರವು ಬಿಡುಗಡೆಗೆ ಸಿದ್ದವಾಗಿದೆ. ವಿಜಯ್ ಕನ್ನಡಿಗ ರಚಿಸಿ, ನಿರ್ದೇಶಿಸಿರುವ ಈ ಚಿತ್ರವು ಇದೇ ಮಾರ್ಚ್ 7ರಂದು ಬಿಡುಗಡೆಯಾಗುತ್ತಿದೆ. ವಿಶ್ವವಿಖ್ಯಾತ ಜೋಗ ಜಲಪಾತದ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ, ಮಲೆನಾಡಿನ ಪ್ರಮುಖ ಸ್ಥಳಗಳಲ್ಲಿ ಚಿತ್ರಕ್ಕೆ ಶೂಟಿಂಗ್‌ ನಡೆದಿದೆ. ಚಿತ್ರದಲ್ಲಿ ತೇಜಸ್ವಿನಿ ಶೇಖರ್, ತಿಲಕ್ ಶೇಖರ್, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ಗೋವಿಂದೇ ಗೌಡ, ನಿರಂಜನ್
ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ಅವಿನಾಶ್ ಆರ್ ಬಸುತ್ಕರ್ ಸಂಗೀತ ಸಂಯೋಜಿಸುತ್ತಿದ್ದು, ಸುನೀತ್ ಹಲಗೇರಿ ಛಾಯಾಗ್ರಹಣವಿದೆ. Seven Star Pictures ಬ್ಯಾನರ್‌ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ಮೋಹನ್ ಎಲ್ ರಂಗಕಹಳೆ ಸಂಕಲನ, ವಿ ನಾಗೇಂದ್ರ ಪ್ರಸಾದ್ ಮತ್ತು ಜಯಂತ್ ಕಾಯ್ಕಿಣಿ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಕಲೈ ಮಾಸ್ಟರ್ ನೃತ್ಯ ನಿರ್ದೇಶನ, ಅವಿನಾಶ್ ಆರ್ ಬಸುತ್ಕರ್ ಸಂಗೀತ
ಸಂಯೋಜನೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here