ವಿಜಯ್‌ ಕನ್ನಡಿಗ ನಿರ್ದೇಶನದಲ್ಲಿ ವಿಜಯ ರಾಘವೇಂದ್ರ ನಟಿಸಿರುವ ‘ಜೋಗ್‌ 101’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ಇದೊಂದು ಸಸ್ಪೆನ್ಸ್‌ – ಥ್ರಿಲ್ಲರ್‌ ಕಥಾವಸ್ತು. ತೇಜಸ್ವಿನಿ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಇದೇ ಮಾರ್ಚ್‌ 7ರಂದು ಸಿನಿಮಾ ತೆರೆಕಾಣಲಿದೆ.

ವಿಜಯ್ ರಾಘವೇಂದ್ರ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಜೋಗ್ 101’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಜಯ್ ಕನ್ನಡಿಗ ನಿರ್ದೇಶನದ ಚಿತ್ರವಿದು. ತಮ್ಮ ಹೊಸ ಸಿನಿಮಾ ಬಗ್ಗೆ ಮಾತನಾಡಿರುವ ವಿಜಯ ರಾಘವೇಂದ್ರ, ‘ಇದೊಂದು ಸಸ್ಪೆನ್ಸ್- ಆಕ್ಷನ್-ಥ್ರಿಲ್ಲರ್ ಚಿತ್ರ. ಚಿತ್ರದಲ್ಲಿ ಪ್ರೀತಿ, ಹಾಸ್ಯ ಹೀಗೆ ಎಲ್ಲಾ ಅಂಶಗಳು ಇವೆ. ಅವಿನಾಶ್ ಆರ್ ಬಾಸೂತ್ಕರ್ ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗುತ್ತಿವೆ. ನನ್ನೆಲ್ಲಾ ಚಿತ್ರಗಳಲ್ಲಿಯೂ ಒಂದೆರೆಡು ಹಿಟ್ ಹಾಡುಗಳು ಇರುತ್ತಿದ್ದವು. ಆದರೆ ಇತ್ತೀಚಿನ ನನ್ನ ಸಿನಿಮಾಗಳಲ್ಲಿ ಅಂತಹ ಹಿಟ್ ಹಾಡುಗಳು ಯಾವುದೂ ಇರಲಿಲ್ಲ. ಈ ಚಿತ್ರದ ಹಾಡುಗಳು ಆ ಕೊರತೆಯನ್ನು ದೂರ ಮಾಡಿವೆ. ಇನ್ನು ನಿರ್ಮಾಪಕರ ಹೆಸರು ರಾಘವೇಂದ್ರ, ನಿರ್ದೇಶಕರ ಹೆಸರು ವಿಜಯ್ ಅವರಿಬ್ಬರ ಹೆಸರು ಸೇರಿಸಿದಾಗ ನನ್ನ ಹೆಸರು ವಿಜಯ್ ರಾಘವೇಂದ್ರ! ವಿಕ್ರಮ್ ನನ್ನ ಪಾತ್ರದ ಹೆಸರು. ಚಿತ್ರ ನೋಡಿ ಹಾರೈಸಿ’ ಎಂದಿದ್ದಾರೆ.

ಚಿತ್ರದ ನಾಯಕಿಯಾಗಿ ತೇಜಸ್ವಿನಿ ನಟಿಸಿದ್ದಾರೆ. ಚಿತ್ರದಲ್ಲಿ ಮುಗ್ಧ ಹುಡುಗಿ ‘ದಿಶಾ’ ಪಾತ್ರ ಅವರದು. ನಿರ್ಮಾಪಕ ರಾಘವೇಂದ್ರ ಅವರಿಗಿದು ಮೊದಲ ಸಿನಿಮಾ. ನಿರ್ದೇಶಕ ವಿಜಯ್‌ ಅವರು ರಚಿಸಿದ ಕತೆಯನ್ನು ಮೊದಲ ರೀಡಿಂಗ್‌ನಲ್ಲೇ ಅವರು ಓಕೆ ಮಾಡಿದ್ದಾರೆ. ‘ಈ ಚಿತ್ರದ ಕತೆಗೆ ವಿಜಯ್ ರಾಘವೇಂದ್ರ ಅವರೇ ಸೂಕ್ತ ಎಂದು ಅಂದುಕೊಂಡಿದ್ದೆವು. ವಿಜಯ್ ರಾಘವೇಂದ್ರ ಅವರು ಕಥೆ ಕೇಳಿ ನಟಿಸಲು ಒಪ್ಪಿಕೊಂಡರು’ ಎನ್ನುತ್ತಾರೆ ನಿರ್ದೇಶಕ ವಿಜಯ್‌ ಕನ್ನಡಿಗ. Seven Star Pictures ಬ್ಯಾನರ್‌ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದೆ. ಅವಿನಾಶ್ ಆರ್ ಬಾಸೂತ್ಕರ್ ಸಂಗೀತ, ಸುನೀತ್ ಹಲಗೇರಿ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಗೋವಿಂದೇ ಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇದೇ ಮಾರ್ಚ್‌ 7ರಂದು ಸಿನಿಮಾ ತೆರೆಕಾಣುತ್ತಿದೆ.

LEAVE A REPLY

Connect with

Please enter your comment!
Please enter your name here