ವೈಭವ್‌ ಮಹಾದೇವ್‌ ನಿರ್ದೇಶನದ ನೂತನ ಸಿನಿಮಾ ‘ಜೂನಿ’ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಪೃಥ್ವಿ ಅಂಬರ್‌ ಮತ್ತು ರಿಷಿಕಾ ನಾಯಕ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಚಿತ್ರಕ್ಕೆ ನಕುಲ್‌ ಅಭಯಂಕರ್‌ ಸಂಗೀತ ಸಂಯೋಜಿಸುತ್ತಿದ್ದಾರೆ.

‘ದಿಯಾ’ ಸಿನಿಮಾ ಖ್ಯಾತಿಯ ಪೃಥ್ವಿ ಅಂಬಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಜೂನಿ’ ಸಿನಿಮಾದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಚಲನಚಿತ್ರವನ್ನು ಯುವ ಪ್ರತಿಭೆ ವೈಭವ್ ಮಹಾದೇವ್ ನಿರ್ದೇಶಿಸುತ್ತಿದ್ದಾರೆ. ವೈಭವ್ ಮಹಾದೇವ್ ಅವರು ಈ ಹಿಂದೆ ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದರು. ಪ್ರಾಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಇವರು ಈ ಸಿನಿಮಾಗೆ ಕತೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಿಷಿಕಾ ನಾಯಕ್ ನಾಯಕಿಯಾಗಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದು ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ‘ದಿಯಾ’ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕತೆಯ ಎಳೆ ಇಟ್ಟುಕೊಂಡು ಚಿತ್ರಕಥೆ ಹೆಣೆಯಲಾಗಿದೆ. Trishula Creations ಬ್ಯಾನರ್‌ ಅಡಿ ಮೋಹನ್ ಕುಮಾರ್ ಎಸ್, ಶ್ರೇಯಸ್ ವೈ ಎಸ್ ಚಿತ್ರವನ್ನು ನಿರ್ಮಿಸಿದ್ದಾರೆ. ಸದ್ದಿಲ್ಲದೇ ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮುಗಿಸಿರುವ ‘ಜೂನಿ’ ಚಿತ್ರತಂಡ ಜನವರಿಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ನಕುಲ್ ಅಭಯಂಕರ್‌ ಸಂಗೀತ, ಶಶಾಂಕ್ ನಾರಾಯಣ ಸಂಕಲನ, ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಪೃಥ್ವಿ ಅಂಬಾರ್‌ ಸಾಲು ಸಾಲು ಸಿನಿಮಾಗಳಲ್ಲಿ ನಿರತರಾಗಿದ್ದಾರೆ. ಕನ್ನಡದ ಜೊತೆಗೆ ತಮಿಳು ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here