ಶ್ರೀ ಮತ್ತು ಪ್ರಣತಿ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ‘ಜಸ್ಟ್ ಪಾಸ್’ ಸಿನಿಮಾ ನಾಳೆ (ಫೆ. 9) ತೆರೆಕಾಣುತ್ತಿದೆ. ಕಾಲೇಜು ವಿದ್ಯಾರ್ಥಿಗಳ ತರಲೆ, ತಾಪತ್ರಯಗಳ ಜೊತೆ ಉತ್ತಮ ಸಂದೇಶವೊಂದನ್ನು ಹೇಳುತ್ತಿದ್ದೇವೆ ಎನ್ನುತ್ತಾರೆ ಈ ಚಿತ್ರದ ನಿರ್ದೇಶಕ ಕೆ ಎಂ ರಘು. ಹರ್ಷವರ್ಧನ್ ರಾಜ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
ಸಾಮಾನ್ಯವಾಗಿ ಹೆಚ್ಚು ಅಂಕಗಳನ್ನು ತೆಗೆದುಕೊಂಡವರಿಗೆ ಸಾಕಷ್ಟು ಕಾಲೇಜುಗಳಿರುತ್ತದೆ. ವಿಶೇಷವೆಂದರೆ ಈ ಚಿತ್ರದಲ್ಲಿ ಜಸ್ಟ್ ಪಾಸ್ ಆದವರಿಗೆ ಅಂತಲೇ ಒಂದು ಕಾಲೇಜು ಇದೆ! ಆ ಕಾಲೇಜಿನ ವಿದ್ಯಾರ್ಥಿಗಳ ತರಲೆ, ತಮಾಷೆಗಳನ್ನು ನಿರ್ದೇಶಕ ರಘು ಈ ಚಿತ್ರದಲ್ಲಿ ತೋರಿಸಿದ್ದಾರೆ. ವಿದ್ಯಾರ್ಥಿಗಳ ತರಲೆ, ತಾಪತ್ರಯಗಳ ಜೊತೆಜೊತೆಗೆ ಒಂದೊಳ್ಳೆಯ ಸಂದೇಶವನ್ನೂ ಹೇಳುತ್ತಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ರಘು. ಕೆ ವಿ ಶಶಿಧರ್ ನಿರ್ಮಿಸಿರುವ ಚಿತ್ರದ ಮುಖ್ಯಭೂಮಿಕೆಯಲ್ಲಿ ಶ್ರೀ ಮತ್ತು ಪ್ರಣತಿ ಇದ್ದಾರೆ. ಟ್ರೇಲರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆದಿದ್ದ ಸಿನಿಮಾ ನಾಳೆ (ಫೆ. 9) ತೆರೆಕಾಣುತ್ತಿದೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಸುಜಯ್ ಕುಮಾರ್ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಕಲೈ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಅರ್ಜುನ್ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ನಿರ್ದೇಶಕ ಕೆ ಎಂ ರಘು ಮತ್ತು ರಘು ನಿಡವಳ್ಳಿ ಚಿತ್ರಕ್ಕೆ ಸಂಭಾಷಣೆ ರಚಿಸಿದ್ದಾರೆ. ಶ್ರೀ, ಪ್ರಣತಿ, ರಂಗಾಯಣ ರಘು, ಸಾಧುಕೋಕಿಲ ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ.