ಆರ್.ಚಂದ್ರು ನಿರ್ದೇಶನದ ‘ಕಬ್ಜ’ ಚಿತ್ರಕ್ಕೆ ಮತ್ತೆ ಚಾಲನೆ. ಅಕ್ಟೋಬರ್ 4ರಿಂದ ನಡೆಯಲಿರುವ ಐದನೇ ಹಂತದ ಚಿತ್ರೀಕರಣದಲ್ಲಿ ಉಪೇಂದ್ರ,  ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಹಲವು ಖ್ಯಾತ ನಟರು ಭಾಗಿ.

ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಎಂದು ಸದ್ದು ಮಾಡುತ್ತಿರುವ, ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಐದನೇ ಹಂತದ ಚಿತ್ರೀಕರಣ ಅಕ್ಟೋಬರ್ 4ರಿಂದ ಆರಂಭವಾಗಲಿದೆ. ಈ ಹಂತದ ಚಿತ್ರೀಕರಣಕ್ಕಾಗಿ ಕೆಜಿಎಫ್ ಖ್ಯಾತಿಯ ಕಲಾನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ  ಮಿನರ್ವ ಮಿಲ್‌ನಲ್ಲಿ  ಅದ್ಧೂರಿ ಸೆಟ್ ನಿರ್ಮಾಣವಾಗಿದೆ. ಈ ಸೆಟ್‌ನಲ್ಲಿ ಸುಮಾರು 42 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ಉಪೇಂದ್ರ, ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಅನೇಕ ಹೆಸರಾಂತ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಈ ಹಂತದ ಚಿತ್ರೀಕರಣ ಮುಗಿದರೆ, ಕಬ್ಜ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಂತೆ. ಕೊನೆಯ ಹಂತದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯಲಿದೆ.

ಆರ್.ಚಂದ್ರು ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಉಪೇಂದ್ರ ಅವರ ಜೊತೆ‌ ಕಿಚ್ಚ‌ ಸುದೀಪ ಅವರು ಕೂಡ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಅಭಿಮಾನಿಗಳ ಕಾತುರವನ್ನು ಇನ್ನಷ್ಟು ಹೆಚ್ಚಿಸಿದೆ. ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ.ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ ಚಿತ್ರಕ್ಕಿದೆ. ಕಾಮರಾಜನ್, ಜಗಪತಿ ಬಾಬು, ರಾಹುಲ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವಾಬ್ ಶಾ ಚಿತ್ರದ ಇತರೆ ಪ್ರಮುಖ ಕಲಾವಿದರು.

LEAVE A REPLY

Connect with

Please enter your comment!
Please enter your name here