ಬಹುನಿರೀಕ್ಷಿತ ‘ಕಾಂತಾರ – ಅಧ್ಯಾಯ 1’ ಸಿನಿಮಾದ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆಯಾಗಿದೆ. ಪೋಸ್ಟರ್‌ನಲ್ಲಿ ರಿಷಬ್‌ ಶೆಟ್ಟಿ ಕ್ರೋಧಗೊಂಡಿರುವ ಶಿವನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹೊಂಬಾಳೆ ಫಿಲಂಸ್‌ ನಿರ್ಮಾಣದ ಸಿನಿಮಾ ಏಳು ಭಾಷೆಗಳಲ್ಲಿ ತೆರೆಕಾಣಲಿದೆ.

ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ‘ಕಾಂತಾರ – ಅಧ್ಯಾಯ 1’ ಸಿನಿಮಾದ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆಯಾಗಿದೆ. ಸಿನಿಮಾ ನಿರ್ಮಿಸುತ್ತಿರುವ Hombale Films, ಪೋಸ್ಟರ್‌ಗಳನ್ನು ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದು, ‘ದೈವಿಕ ಭೂಮಿಗೆ ಹೆಜ್ಜೆ ಹಾಕಿ ‘ಕಾಂತಾರ’ ಫಸ್ಟ್ ಲುಕ್ ಮತ್ತು ಟೀಸರ್ ಅನ್ನು 7 ಭಾಷೆಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ’ ಎಂದು ಕ್ಯಾಪ್ಶನ್‌ ಹಾಕಿದೆ. ಪೋಸ್ಟರ್‌ನಲ್ಲಿ ರಿಷಬ್‌ ಶೆಟ್ಟಿ ಕ್ರೋಧಗೊಂಡಿರುವ ಶಿವನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಕೊಡಲಿ ಹಿಡಿದುಕೊಂಡಿದ್ದಾರೆ. ಟೀಸರ್‌ನಲ್ಲಿ ‘ಕಾಂತಾರ- ಒಂದು ದಂತಕಥೆ’ ಚಿತ್ರದ ಒಂದು ಭಾಗದಿಂದ ಆರಂಭವಾಗಿ ರಿಷಬ್‌ ಶೆಟ್ಟಿ ಅವರ ಉಗ್ರ ರೂಪ ತೋರಿಸಿದೆ.

Hombale Films ಬ್ಯಾನರ್‌ ಅಡಿಯಲ್ಲಿ ವಿಜಯ್‌ ಕಿರಗಂದೂರು ಚಿತ್ರ ನಿರ್ಮಿಸುತ್ತಿದ್ದಾರೆ. ಬಿ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜನೆ, ಅರವಿಂದ್‌ ಎಸ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಮತ್ತು ಕೆ ಎಂ ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ – ಒಂದು ದಂತಕಥೆ’ ಸಿನಿಮಾ ಬಿಡುಗಡೆಯಾಗಿ ವರ್ಷ ಕಳೆದಿದೆ. ‘ಕಾಂತಾರ – ಅಧ್ಯಾಯ 1’ ಸಿನಿಮಾ ಮೂಲ ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here