ಸಂಗೀತ ಭಟ್‌ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಕ್ಲಾಂತ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ವೈಭವ್‌ ಪ್ರಶಾಂತ್‌ ನಿರ್ದೇಶನದ ಸಸ್ಪೆನ್ಸ್‌ – ಥ್ರಿಲ್ಲರ್‌ ಸಿನಿಮಾ ಸದ್ಯದಲ್ಲೇ ತೆರೆಕಾಣಲಿದೆ.

ವೈಭವ್ ಪ್ರಶಾಂತ್ ನಿರ್ದೇಶನದ ‘ಕ್ಲಾಂತ’ ಸಸ್ಪೆನ್ಸ್ – ಥ್ರಿಲ್ಲರ್ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ನಟಿ ಸಂಗೀತ ನಾಯಕಿಯಾಗಿ ಈ ಸಿನಿಮಾ ಮೂಲಕ ಕಮ್​ ಬ್ಯಾಕ್ ಮಾಡಿದ್ದಾರೆ. ದಟ್ಟ ಅರಣ್ಯವೊಂದಕ್ಕೆ ಪ್ರವಾಸಕ್ಕೆ ತೆರಳುವ ಇಬ್ಬರು ಪ್ರೇಮಿಗಳನ್ನು ರೌಡಿಗಳ ಗುಂಪೊಂದು ಡ್ರೋನ್‌ ಮೂಲಕ ಆಕ್ರಮಣ ಮಾಡುತ್ತದೆ. ಆ ಗುಂಪಿನಿಂದ ಪ್ರೇಮಿಗಳಿಬ್ಬರು ಹೇಗೆ ತಪ್ಪಿಸಿಕೊಂಡು ಕಾಡಿನಿಂದ ಹೊರಬರುತ್ತಾರೆ? ಅವರ ವಿರುದ್ಧ ಹೇಗೆ ಹೋರಾಡುತ್ತಾರೆ? ಎನ್ನುವುದನ್ನು ಟೀಸರ್‌ನಲ್ಲಿ ತೋರಿಸಲಾಗಿದೆ. ‘ರಂಗನ್ ಸ್ಟೈಲ್’, ‘ದಗಲು ಬಾಜಿಲು’ ಸೇರಿದಂತೆ ಇನ್ನೂ ಅನೇಕ ಸಿನಿಮಾಗಳನ್ನು ವೈಭವ್‌ ಪ್ರಶಾಂತ್‌ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಎಂ ವಿಘ್ನೇಶ್ ನಾಯಕನಾಗಿ ನಟಿಸುತ್ತಿದ್ದು, ಶೋಭರಾಜ್, ವೀಣಾ ಸುಂದರ್, ಕಾಮಿಡಿ ಕಿಲಾಡಿ ದೀಪಿಕಾ, ಪ್ರವೀಣ್ ಜೈನ್, ಯುವ, ತಿಮ್ಮಪ್ಪ ಕುಲಾಲ್, ಸ್ವಪ್ನ, ರಾಘವೇಂದ್ರ ಕಾರಂತ್, ಪಂಚಮಿ ವಾಮಂಜೂರ್, ವಾಮದೇವ ಪುಣಿಂಚತ್ತಾಯ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾವನ್ನು ಕುಕ್ಕೆ ಸುಬ್ರಹ್ಮಣ್ಯ, ಗುಂಡ್ಯ, ಕಳಸ ಸುತ್ತ ಮುತ್ತಲಿನ ಕಾಡಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಎಸ್ ಪಿ ಚಂದ್ರಕಾಂತ್ ಸಂಗೀತ, ಪಿ ಆರ್ ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ, ಮಹೇಶ್ ದೇವ್ ಡಿ ಎನ್ ಪುರ ಸಂಭಾಷಣೆ ಚಿತ್ರಕ್ಕಿದೆ. ಸಂತೋಷ್ ನಾಯ್ಕ್, ‘ವರಾಹ ರೂಪಂ’ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯ ಹಾಡುಗಳಿಗಿದೆ. Anugraha Power Media ಬ್ಯಾನರ್ ನಡಿ ಉದಯ್ ಅಮ್ಮಣ್ಣಾಯ ಸಿನಿಮಾ ನಿರ್ಮಿಸಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಹೇಮಂತ್ ರೈ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದು, ಚಿತ್ರವನ್ನು ಶೀಘ್ರದಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ.

https://www.instagram.com/reel/CyGejomLNqB/?utm_source=ig_web_copy_link

LEAVE A REPLY

Connect with

Please enter your comment!
Please enter your name here