ಗಣೇಶ್‌ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ‘ಮೈ ಮ್ಯಾರೇಜ್‌ ಈಸ್‌ ಫಿಕ್ಸ್ಡ್‌’ ಹಾಡು ಬಿಡುಗಡೆಯಾಗಿದೆ. ನಿಶಾನ್‌ ರಾಯ್‌ ರಚಿಸಿರುವ ಹಾಡಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದು, ಚಂದನ್‌ ಶೆಟ್ಟಿ ಹಾಡಿದ್ದಾರೆ. ಆನಂದ್‌ ಆಡಿಯೋ ಯೂಟ್ಯೂಬ್‌ ಚಾನೆಲ್‌ನಲ್ಲಿ ಸಾಂಗ್‌ ಬಿಡುಗಡೆಯಾಗಿದೆ.

‘ಇದು ಗಣೇಶ್ ಅವರಿಗಾಗಿಯೇ ಮಾಡಿರುವ ಕತೆ. ಫ್ಯಾಮಿಲಿ ಎಂಟರ್‌ಟೇನರ್‌. ಎಲ್ಲಾ ಜನರೇಶನ್ ಆಡಿಯನ್ಸ್‌ಗೂ ಇಷ್ಟವಾಗುವ ಕತೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಮೊದಲ ಹಾಡು ಈಗ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ 64 ಕಲಾವಿದರು ಅಭಿನಯಿಸಿದ್ದಾರೆ’ ಎನ್ನುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು. ಈ ಸಿನಿಮಾದ ಮೊದಲ ಸಾಂಗ್‌ ‘ಮೈ ಮ್ಯಾರೇಜ್‌ ಈಸ್‌ ಫಿಕ್ಸ್ಡ್‌’ ಮೊನ್ನೆ ಮೈಸೂರಿನಲ್ಲಿ ಬಿಡುಗಡೆಯಾಗಿದೆ. ನಿಶಾನ್‌ ರಾಯ್‌ ರಚಿಸಿರುವ ಹಾಡಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದು, ಚಂದನ್‌ ಶೆಟ್ಟಿ ಹಾಡಿದ್ದಾರೆ. ಹಾಡಿನಲ್ಲಿ ಗಣೇಶ್‌ ಮದುವೆ ಗಂಡಿನ ವೇಷದಲ್ಲಿದ್ದು, ಎಂಟು ನಾಯಕಿಯರು ಅವರೊಂದಿಗೆ ಡ್ಯಾನ್ಸ್‌ ಮಾಡಿದ್ದಾರೆ. ಇದೊಂದು ಕಾಮಿಡಿ – ಎಂಟರ್‌ಟೇನರ್‌ ಎನ್ನುವ ಸೂಚನೆ ನೀಡುತ್ತದೆ ಈ ಹಾಡು.

ಶ್ರೀನಿವಾಸರಾಜು ಈ ಹಿಂದೆ ‘ದಂಡುಪಾಳ್ಯ’ ಕ್ರೈಂ – ಥ್ರಿಲ್ಲರ್‌ ಸಿನಿಮಾ ಮಾಡಿದ್ದವರು. ಅವರು ತಮಗೆ ಸಿನಿಮಾ ಮಾಡುವುದಾಗಿ ಹೇಳಿದಾಗ ಆಶ್ಚರ್ಯವಾಯ್ತು ಎನ್ನುತ್ತಾರೆ ಗಣೇಶ್‌. ‘ಶ್ರೀನಿವಾಸರಾಜು ಅವರು ಫೋನ್ ಮಾಡಿ ಕಥೆ ಹೇಳಬೇಕೆಂದಾಗ ನನಗೆ ಆಶ್ಚರ್ಯವಾಯಿತು. ಅವರು ‘ದಂಡುಪಾಳ್ಯ’ದಂತಹ ಥ್ರಿಲ್ಲರ್ ಚಿತ್ರ ಮಾಡಿರುವ ನಿರ್ದೇಶಕರು. ನಾನು ನೋಡಿದರೆ ಪ್ರೇಮಕಥೆಗಳ ನಾಯಕ. ನನಗೆ ಇವರು ಯಾವ ತರಹ ಕಥೆ ಮಾಡಿರಬಹುದು ಅಂದುಕೊಂಡು ಕಥೆ ಕೇಳಿದೆ. ಅವರು ಕಥೆ ಶುರು ಮಾಡಿದ ಕೂಡಲೇ, ನೀವು ಮದುವೆ ಗಂಡಿನ ತರಹ ಬರುತ್ತೀರಾ. ಎಂಟು ನಾಯಕಿಯರು ಮದುವೆ ಹೆಣ್ಣಿನ ತರಹ ಸಿದ್ಧವಾಗಿರುತ್ತಾರೆ ಎಂದರು. ಆಗ ಇದು ನನ್ನ ಜಾನರ್‌ ಚಿತ್ರ ಎಂದುಕೊಂಡೆ. ಚಿತ್ರದಲ್ಲಿ ಒಳ್ಳೆಯ ಟ್ವಿಸ್ಟ್ ಇಟ್ಟಿದ್ದಾರೆ. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿದೆ’ ಎನ್ನುತ್ತಾರೆ ಗಣೇಶ್‌. ಪ್ರಶಾಂತ್‌ ಜಿ ರುದ್ರಪ್ಪ ನಿರ್ಮಾಣದ ಚಿತ್ರದ ನಾಯಕಿಯರಾಗಿ ಮಾಳವಿಕ ನಾಯರ್‌, ಶರಣ್ಯ ಶೆಟ್ಟಿ ನಟಿಸಿದ್ದಾರೆ. ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here