ಅರುಣ್‌ ನಿರ್ದೇಶನದಲ್ಲಿ ದೀಕ್ಷಿತ್‌ ಶೆಟ್ಟಿ ನಟಿಸಿರುವ ‘ಕೆಟಿಎಂ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ. ರಿಷಭ್‌ ಶೆಟ್ಟಿ, ರಶ್ಮಿಕಾ ಮಂದಣ್ಣ, ಕೀರ್ತಿ ಸುರೇಶ್‌, ಶೈನ್‌ ಟಾಮ್‌ ಚಾಕೋ ಸೇರಿದಂತೆ ಹಲವು ತಾರೆಯರು ಸಾಮಾಜಿಕ ಜಾಲತಾಣದಲ್ಲಿ ಟ್ರೇಲರ್‌ ಬಿಡುಗಡೆಗೊಳಿಸಿ ಚಿತ್ರಕ್ಕೆ ಶುಭಹಾರೈಸಿದ್ದಾರೆ.

ದೀಕ್ಷಿತ್‌ ಶೆಟ್ಟಿ ಹೀರೋ ಆಗಿ ನಟಿಸಿರುವ ‘ಕೆಟಿಎಂ’ ಸಿನಿಮಾದ ಟ್ರೇಲರ್ ಅನ್ನು ರಿಷಬ್ ಶೆಟ್ಟಿ, ರಚಿತಾರಾಮ್, ಕೀರ್ತಿ ಸುರೇಶ್, ರಶ್ಮಿಕಾ ಮಂದಣ್ಣ, ಮಲಯಾಳಂ ನಟ ಶೈನ್ ಟಾಮ್ ಚಾಕೋ, ತೆಲುಗಿನ ರಾಹುಲ್ ರವೀಂದ್ರನ್ ಸೇರಿದಂತೆ ಹಲವು ತಾರೆಗಳು ಸಾಮಾಜಿಕ ಹಾಲತಾಣದಲ್ಲಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ದಸರಾ’ ಸಿನಿಮಾದಲ್ಲಿ ನಾನಿ ಜೊತೆಗೆ ತೆರೆ ಹಂಚಿಕೊಂಡಿದ್ದ ಕನ್ನಡದ ‘ದಿಯಾ’ ಚಿತ್ರದ ಖ್ಯಾತಿಯ ದೀಕ್ಷಿತ್ ಶೆಟ್ಟಿ ಈಗ ಬಹುಭಾಷಾ ನಟ. ಕನ್ನಡದ ಜೊತೆಗೆ ತೆಲುಗು, ಮಲಯಾಳಂಗೂ ಹೆಜ್ಜೆ ಇಟ್ಟಿರುವ ಇವರ ಬಹುನಿರೀಕ್ಷಿತ ‘ಕೆಟಿಎಂ’ ಸಿನಿಮಾ ಶೀರ್ಷಿಕೆಯಿಂದ ಹಾಗೂ ಹಾಡುಗಳ ಮೂಲಕ ಗಮನಸೆಳೆಯುತ್ತಿದೆ.

ಒಂದು ಸುಂದರ ಪ್ರೇಮಕಥೆ. ಈ ಕಥೆಯಲ್ಲಿ ಒಬ್ಬ ನಾಯಕ. ಇಬ್ಬರು ನಾಯಕಿಯರು. ಪ್ರೀತಿಗಾಗಿ ಪರಿತಪ್ಪಿಸುವ ನಾಯಕ. ನಾಯಕ ಅಂದ್ರೆ ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವ ನಾಯಕಿಯರು. ನಾಯಕನ ಜೀವನದಲ್ಲಿ ನಡೆದ ಏರಿಳಿತಗಳನ್ನು ಟ್ರೇಲರ್‌ನಲ್ಲಿ ಕಾಣಬಹುದು. ಟ್ರೇಲರ್‌ನಲ್ಲಿ ದೀಕ್ಷಿತ್ ಶೆಟ್ಟಿ ಭಗ್ನಪ್ರೇಮಿಯಾಗಿ ಕಾಣಿಸಿಕೊಂಡರೆ, ಸಂಜನಾ ದಾಸ್ ಹಾಗೂ ಕಾಜಲ್ ಕುಂದರ್ ಪ್ರೇಯಸಿಯರಾಗಿ ಕಾಣಿಸಿಕೊಂಡಿದ್ದಾರೆ. ಉಷಾ ಭಂಡಾರಿ, ಪ್ರಕಾಶ್ ತುಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಣಯ್ಯ, ದೇವ್ ದೇವಯ್ಯ, ಅಭಿಷೇಕ್, ಬಿಗ್‌ಬಾಸ್‌ ಖ್ಯಾತಿಯ ತುಕಾಲಿ ಸಂತೋಷ್ ಚಿತ್ರದಲ್ಲಿ ನಟಿಸಿದ್ದಾರೆ. ‘ಅಥರ್ವ’ ಸಿನಿಮಾ ನಿರ್ದೇಶಿಸಿದ್ದ ಅರುಣ್ ಅವರು ಈ ಸಿನಿಮಾ ನಿರ್ದೇಶಿಸಿದ್ದು, ಇದು ಇವರ ಎರಡನೇ ಚಿತ್ರ. ಸಿನಿಮಾವನ್ನು Mahasimha Movies ಬ್ಯಾನರ್‌ ಅಡಿಯಲ್ಲಿ ವಿನಯ್ ನಿರ್ಮಾಣ ಮಾಡಿದ್ದು, ರಕ್ಷಯ್ ಸಹ ನಿರ್ಮಾಣ ಚಿತ್ರಕ್ಕಿದೆ. ನವೀನ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಸಂಗೀತ ಸಂಯೋಜನೆ, ಅಭಿನಂದನ್ ದೇಶಪ್ರಿಯ ಸಂಭಾಷಣೆ ಚಿತ್ರಕ್ಕಿದೆ. ಫೆಬ್ರವರಿ 16ಕ್ಕೆ ಸಿನಿಮಾ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here