ಮುತ್ತು ಎ ಎನ್‌ ನಿರ್ದೇಶನದ ‘ಲೇಡೀಸ್‌ ಬಾರ್‌’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಮುತ್ತು ಎ ಎನ್ ನಿರ್ದೇಶಿಸಿರುವ ‘ಲೇಡೀಸ್ ಬಾರ್’ ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ರಾಜಕೀಯ ಮುಖಂಡರಾದ ಎಂ ಡಿ ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದ್ದಾರೆ. ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ತಮ್ಮ ಸಿನಿಮಾ ಕುರಿತು ಮಾತನಾಡುವ ನಿರ್ದೇಶಕರು, ‘ಲೇಡೀಸ್ ಬಾರ್ ಶೀರ್ಷಿಕೆ ಕೇಳಿದ ತಕ್ಷಣ ಕುಡಿತದ ಕುರಿತಾದ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವನ್ನಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಿದ್ದೇವೆ. ಚಿತ್ರ ನೋಡಿದಾಗ ಅದು ತಿಳಿಯುತ್ತದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ‌. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ತೆರೆಗೆ ತರುತ್ತೇವೆ’ ಎಂದಿದ್ದಾರೆ.

ಚಿತ್ರದ ನಿರ್ಮಾಪಕ ಟಿ ಎಂ ಸೋಮರಾಜು ಮೂಲತಃ ಉದ್ಯಮಿ ಮತ್ತು ರೈತ. ‘ನನಗೆ ಸಿನಿಮಾರಂಗದ ಪರಿಚಯವೇ ಇಲ್ಲ. ನನ್ನ ಗೆಳೆಯ ರಾಜಶೇಖರ್ ನನ್ನನ್ನು ಈ ರಂಗಕ್ಕೆ ಕರೆದುಕೊಂಡು ಬಂದಿದ್ದಾರೆ. ನಿರ್ದೇಶಕ ಎ. ಎನ್ ಮುತ್ತು ಅವರು ಹೇಳಿದ ಕಥೆ ಇಷ್ಟವಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆ. ಪ್ರಮುಖ ಪಾತ್ರದಲ್ಲೂ ನಟಿಸಿದ್ದೇನೆ’ ಎನ್ನುತ್ತಾರೆ ಸೋಮರಾಜು. ಹರ್ಷ ಕಾಗೋಡ್ ಸಂಗೀತ, ವೀನಸ್ ಮೂರ್ತಿ ಛಾಯಾಗ್ರಹಣ, ಜಗ್ಗು ಮಾಸ್ಟರ್‌ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಹರೀಶ್ ರಾಜ್, ಶಿವಾನಿ, ಮಾಧುರಿ, ಗಣೇಶ್ ರಾವ್, ಆರಾಧ್ಯ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ಸಿರಿ ಮ್ಯೂಸಿಕ್‌ನಲ್ಲಿ ಈ ಚಿತ್ರದ ಹಾಡುಗಳನ್ನು ನೋಡಿ, ನಿಮಗನಿಸಿದನ್ನು ಕಾಮೆಂಟ್ ಮಾಡಿ. ಉತ್ತಮ ಕಾಮೆಂಟ್‌ಗೆ ನಿರ್ಮಾಪಕರು ಮೊಬೈಲ್‌ ಅನ್ನು ಉಡುಗೊರೆಯಾಗಿ ನೀಡಲಿದ್ದಾರೆ’ ಎಂದಿದ್ದಾರೆ ಸಿರಿ ಮ್ಯೂಸಿಕ್ಸ್‌ನ ಚಿಕ್ಕಣ್ಣ. ರಾಜಶೇಖರ್ ಸಹ ನಿರ್ಮಾಣ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here