ತ್ರಿಗುಣ್‌ ಹೀರೋ ಆಗಿ ನಟಿಸಿರುವ ‘ಲೈನ್‌ ಮ್ಯಾನ್‌’ ಕನ್ನಡ – ತೆಲುಗು ದ್ವಿಭಾಷಾ ಸಿನಿಮಾಗೆ ಸೆನ್ಸಾರ್‌ನಿಂದ ಯು ಸರ್ಟಿಫಿಕೇಟ್‌ ಸಿಕ್ಕಿದೆ. ಪರ್ಪಲ್‌ ರಾಕ್‌ ಸಂಸ್ಥೆ ನಿರ್ಮಾಣದಲ್ಲಿ ರಘು ಶಾಸ್ತ್ರಿ ನಿರ್ದೇಶಿಸಿರುವ ಈ ಸಿನಿಮಾ ಅಕ್ಟೋಬರ್‌ ಮೊದಲ ವಾರ ತೆರೆಕಾಣಲಿದೆ.

‘ರನ್‌ ಆಂಟೋನಿ’, ‘ಟಕ್ಕರ್’ ಸಿನಿಮಾಗಳನ್ನು ನಿರ್ದೇಶಿಸಿದ್ದ ರಘು ಶಾಸ್ತ್ರಿ ಸಾರಥ್ಯದಲ್ಲಿ ಸಿದ್ಧವಾಗಿರುವ ಸಿನಿಮಾ ‘ಲೈನ್‌ ಮ್ಯಾನ್‌’ಗೆ ಸೆನ್ಸಾರ್‌ನಿಂದ ಯು ಸರ್ಟಿಫಿಕೇಟ್‌ ಸಿಕ್ಕಿದೆ. ‘ಭಿನ್ನ’, ‘ಡಿಯರ್ ಸತ್ಯ’ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಕೊಡುಗೆ ಇದು. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ‘ಲೈನ್ ಮ್ಯಾನ್’ ಸಿನಿಮಾದಲ್ಲಿ ತ್ರಿಗುಣ್‌ ನಾಯಕನಟನಾಗಿ ಅಭಿನಯಿಸುತ್ತಿದ್ದಾರೆ. ಆರ್ ಜಿ ವಿ ನಿರ್ದೇಶನದ ‘ಕೊಂಡ’ ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗೆ ಹೀರೋ ಆಗಿ ಇದು ಮೊದಲ ಸಿನಿಮಾ. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದು, ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ‌, ಅಪೂರ್ವಶ್ರೀ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್‌ ಸಂಬಂಧಿಸಿದ ತೊಂದರೆ ಸರಿಪಡಿಸುವ ಲೈನ್ ಮ್ಯಾನ್ ಸುತ್ತ ಈ ಕತೆ ನಡೆಯಲಿದೆ. ತ್ರಿಗುಣ್ ‘ಲೈನ್ ಮ್ಯಾನ್’ ಪಾತ್ರದಲ್ಲಿದ್ದಾರೆ. ಮೂರು ಹಾಡುಗಳಿರುವ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಚಿತ್ರಕ್ಕೆ ಪ್ರಚುರ ಪಿ ಪಿ, ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಚಾಮರಾಜನಗರ ಚಂದಕವಾಡಿಯಲ್ಲಿ ಬಹುಪಾಲು ಶೂಟಿಂಗ್ ನಡೆಸಲಾಗಿದ್ದು, ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದೆ. ಅಕ್ಟೋಬರ್ ಮೊದಲ ವಾರ ಸಿನಿಮಾ ತೆರೆಗೆ ಬರಲಿದೆ.

LEAVE A REPLY

Connect with

Please enter your comment!
Please enter your name here