ರಮೇಶ್ ಅರವಿಂದ್ ನಟನೆಯ ಯಶಸ್ವೀ ‘ಶಿವಾಜಿ ಸುರತ್ಕಲ್‌’ ಸಿನಿಮಾದ ಸೀಕ್ವೆಲ್‌ ಶುರುವಾಗಲಿದೆ. ಈ ಚಿತ್ರದಲ್ಲಿ ನಟಿ ಮೇಘನಾ ಗಾಂವ್ಕರ್‌ ಸೆಂಟ್ರಲ್ ಕ್ರೈಂ ಬ್ರ್ಯಾಂಚ್‌ನ CCB ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ತೆರೆಕಂಡಿದ್ದ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್‌’ ಮಿಸ್ಟರಿ ಥ್ರಿಲ್ಲರ್ ಸಿನಿಮಾ ಯಶಸ್ವಿಯಾಗಿತ್ತು. ಆಕಾಶ್ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದ ಚಿತ್ರದ ನಾಯಕಿಯಾಗಿ ರಾಧಿಕಾ ನಾರಾಯಣ್ ನಟಿಸಿದ್ದರು. ಇದೀಗ ಚಿತ್ರದ ಸೀಕ್ವೆಲ್ ಸಿದ್ಧವಾಗುತ್ತಿದ್ದು, ಹೀರೋ ಶಿವಾಜಿಗೆ ಪತ್ತೇದಾರಿಕೆಯಲ್ಲಿ ಸಹಾಯ ಮಾಡಲು CCB ಅಧಿಕಾರಿಯೊಬ್ಬರ ಪ್ರವೇಶವಾಗುತ್ತಿದೆ. ಈ ಪ್ರಮುಖ ಪಾತ್ರದಲ್ಲಿ ನಟಿ ಮೇಘನಾ ಗಾಂವ್ಕರ್ ನಟಿಸುತ್ತಿದ್ದಾರೆ. ವೃತ್ತಿ ಬದುಕಿನಲ್ಲಿ ಇದು ಅವರಿಗೆ ಮೊದಲ ಪೊಲೀಸ್ ಪಾತ್ರ.

ಇನ್ನು ಸೀಕ್ವೆಲ್‌ನಲ್ಲಿ ನಾಯಕಿಯಾಗಿ ರಾಧಿಕಾ ನಾರಾಯಣ್ ಅವರಲ್ಲದೆ, ರಾಘು ರಮಣಕೊಪ್ಪ ಮತ್ತು ವಿದ್ಯಾ ಮೂರ್ತಿಯವರು ಅವರವರ ಪಾತ್ರಗಳಲ್ಲಿ ಮುಂದುವರೆಯಲಿದ್ದಾರೆ. ಇಷ್ಟು ದಿನ ಗ್ಲಾಮರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಮೇಘನ ಗಾಂವ್ಕರ್ ಚಿತ್ರದಲ್ಲಿ ಟಫ್ ಕಾಪ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ವಿಶೇಷ. ಶಿವಾಜಿಗೆ ಬೆನ್ನೆಲುಬಾಗಿ ನಿಲ್ಲುವ ಮತ್ತು ಮೇಲಧಿಕಾರಿಯ ಪಾತ್ರವಿದು. ಇನ್ನಷ್ಟು ಹೊಸ ತಾರಾಗಣ ಚಿತ್ರತಂಡ ಸೇರಲಿದ್ದು ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ಜಾರಿಯಲ್ಲಿವೆ. ಕೆಲವೇ ದಿನದಲ್ಲಿ ಮುಹೂರ್ತ ಮಾಡಿ ಚಿತ್ರೀಕರಣಕ್ಕೆ ಹೋಗುವುದಾಗಿ ಚಿತ್ರತಂಡ ತಿಳಿಸಿದೆ. ರಮೇಶ್ ಅರವಿಂದ್ ಅವರ 103ನೇ ಚಿತ್ರ ಇದಾಗಿದ್ದು, ರೇಖಾ.ಕೆ.ಎನ್ ಮತ್ತು ಅನುಪ್ ಗೌಡ ಸಿನಿಮಾ ನಿರ್ಮಿಸುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here