‘ಗಂಗೂಬಾಯಿ ಕಥಿಯಾವಾಡಿ’ ಸಿನಿಮಾದ ಅತ್ಯುತ್ತಮ ಸಂಗೀತ ಸಂಯೋಜನೆಗಾಗಿ ಸಂಜಯ್‌ ಲೀಲಾ ಬನ್ಸಾಲಿ ಪ್ರತಿಷ್ಠಿತ Mirchi Music Award ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇದೇ ಚಿತ್ರದ ಗಾಯನಕ್ಕಾಗಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಸಂಜಯ್ ಲೀಲಾ ಬನ್ಸಾಲಿ ಅವರು ‘ಗಂಗೂಬಾಯಿ ಕಥಿಯಾವಾಡಿ’ ಸಿನಿಮಾಗಾಗಿ ಪ್ರತಿಷ್ಠಿತ Mirchi Music Award ‘ವರ್ಷದ ಅತ್ಯುತ್ತಮ ಸಂಗೀತ ಸಂಯೋಜಕ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶ್ರೇಯಾ ಘೋಷಾಲ್‌ ಅವರು ಇದೇ ಚಿತ್ರದ ಗಾಯನಕ್ಕಾಗಿ ‘ಅತ್ಯುತ್ತಮ ಹಿನ್ನೆಲೆ ಗಾಯಕಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಚಿತ್ರದ ವೈಶಿಷ್ಟ್ಯವೆಂದರೆ ನವೀನವಾದ ಸಂಗೀತವಿದ್ದು, ಇದು ರಾಷ್ಟ್ರದಾದ್ಯಂತ ಪ್ರೇಕ್ಷಕರನ್ನು ಸೆಳೆದಿದೆ. ಈ ಚಿತ್ರದ ಹಾಡುಗಳು ಲಕ್ಷಾಂತರ ಜನರ ಮನ ಮುಟ್ಟಿವೆ. ಈ ಮಧುರ ಹಾಡುಗಳು ಸಂಗೀತ ಪರಂಪರೆಯಲ್ಲಿ ಉನ್ನತ ಸ್ಥಾನವನ್ನು ಗಳಿಸಿಕೊಂಡಿವೆ. ಜನಪ್ರಿಯತೆಯ ಜೊತೆಗೆ ವ್ಯಾಪಕವಾದ ಮೆಚ್ಚುಗೆಯನ್ನು ಸಹ ಗಳಿಸಿವೆ. ಸಂಜಯ್ ಲೀಲಾ ಬನ್ಸಾಲಿ ಭಾರತೀಯ ಚಿತ್ರರಂಗದ ಅತ್ಯುತ್ತಮ ಚಲನಚಿತ್ರ ನಿರ್ದೇಶಕರಲ್ಲೊಬ್ಬರು. ಅತ್ಯುತ್ತಮ ಸಂಗೀತ ಸಂಯೋಜಕರಾಗಿಯೂ ಪ್ರಸಿದ್ಧಿ ಗಳಿಸಿದ್ದಾರೆ.

‘ದೇವದಾಸ್’, ‘ಗೋಲಿಯೋನ್ ಕಿ ರಾಸ್‌ ಲೀಲಾ ರಾಮ್-ಲೀಲಾ’, ‘ಪದ್ಮಾವತ್’ ಚಿತ್ರಗಳಿಗೆ ಸಂಗೀತ ನೀಡಿರುವ ಬನ್ಸಾಲಿಯವರ ಪ್ರತಿಭೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿದಿದೆ. ಅವರು ‘ಹಮ್ ದಿಲ್ ದೇ ಚುಕೆ ಸನಮ್’, ‘ದೇವದಾಸ್’, ‘ಬ್ಲಾಕ್’, ‘ಬಾಜಿರಾವ್ ಮಸ್ತಾನಿ’, ‘ಪದ್ಮಾವತ್’ ಸೇರಿದಂತೆ ಹಲವಾರು ಚಲನಚಿತ್ರಗಳನ್ನು ರಚಿಸಿ, ನಿರ್ದೇಶಿಸಿ, ನಿರ್ಮಿಸಿದ್ದಾರೆ. ಏಳು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು 12 ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ರಾಷ್ಟದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಕೂಡ. ತಮ್ಮ ಸುಮಧುರ ಕಂಠದಿಂದಲೇ ಮನೆಮಾತಾಗಿರುವ ಶ್ರೇಯಾ ಘೋಷಾಲ್‌ ಅವರು ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, ನಾಲ್ಕು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳು, ಎರಡು ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿಗಳು, ಎರಡು BFJA ಪ್ರಶಸ್ತಿಗಳು, ಹತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಗೌರವಗಳನ್ನು ಪಡೆದಿದ್ದಾರೆ.

LEAVE A REPLY

Connect with

Please enter your comment!
Please enter your name here