KRG Studios ನಿರ್ಮಾಣದ ‘ಪೌಡರ್‌’ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಬೇಕಿತ್ತು. ಅಂದು ಕನ್ನಡ ಸೇರಿದಂತೆ ಇತರೆ ಭಾಷೆಗಳ ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಹಾಗಾಗಿ ‘ಪೌಡರ್‌’ ಬಿಡುಗಡೆಯನ್ನು ನಿರ್ಮಾಪಕರು ಆಗಸ್ಟ್‌ 23ಕ್ಕೆ ಮುಂದೂಡಿದ್ದಾರೆ.

TVF ಮೋಷನ್‌ ಪಿಕ್ಚರ್ಸ್‌ ಜೊತೆಗೂಡಿ KRG Studios ನಿರ್ಮಿಸಿರುವ ‘ಪೌಡರ್‌’ ಸಿನಿಮಾ ಆಗಸ್ಟ್‌ 15ರಂದು ತೆರೆಗೆ ಬರುತ್ತದೆಂದು ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚಿತ್ರತಂಡದವರು ಪ್ರೊಮೋಷನ್‌ ಕೂಡ ನಡೆಸಿದ್ದರು. ಆದರೆ ಈಗ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ‘ಆಗಸ್ಟ್ 15ರಂದು ಸಾಕಷ್ಟು ಸಿನಿಮಾಗಳು ತೆರೆಗೆ ಬರುತ್ತಿವೆ. ಕನ್ನಡ ಸಿನಿಮಾಗಳ ಜೊತೆಗೆ ಪರಭಾಷಾ ಸಿನಿಮಾಗಳೂ ಬಿಡುಗಡೆಯಾಗುತ್ತಿವೆ. ಹೀಗಾಗಿ ಕೆಆರ್ ಜಿ ನಿರ್ಮಾಣ ಸಂಸ್ಥೆ ಆಗಸ್ಟ್ 15ರ ಬದಲಿಗೆ ಆಗಸ್ಟ್ 23ಕ್ಕೆ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. ಒಂದೇ ದಿನ ಸಾಕಷ್ಟು ಸಿನಿಮಾಗಳು ಬಿಡುಗಡೆಯಾದರೆ ಬಾಕ್ಸಾಫೀಸ್‌ನಲ್ಲಿ ಕ್ಲ್ಯಾಷ್ ಆಗಲಿದೆ. ಕಲೆಕ್ಷನ್ ಮೇಲೆಯೂ ಹೊಡೆತ ಬೀಳಲಿದೆ. ಮೊದಲೇ ಕನ್ನಡ ಚಿತ್ರರಂಗದ ಸ್ಥಿತಿ ಶೋಚನೀಯವಾಗಿದೆ. ಇಂತಹ ಸಂದರ್ಭದಲ್ಲಿ ಬಾಕ್ಸಾಫೀಸ್ ವಾರ್ ಬೇಡ ಎನ್ನುವುದು ನಮ್ಮ ಉದ್ದೇಶ’ ಎಂದಿದ್ದಾರೆ KRG Studiosನ ಕಾರ್ತಿಕ್ ಗೌಡ. ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮಕುಮಾರ್, ಅನಿರುದ್ಧ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here