ಲೋಹಿತ್‌ ಹೆಚ್‌ ನಿರ್ದೇಶನದಲ್ಲಿ ಪ್ರಜ್ವಲ್‌ ದೇವರಾಜ್‌ ನಟಿಸಿರುವ ‘ಮಾಫಿಯಾ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಮಾನವ ಅಂಗಾಂಗಗಳನ್ನು ಸಾಗಿಸುವ ರೆಡ್‌ ಮಾರ್ಕೆಟ್‌ ಚಿತ್ರದ ಕಥಾವಸ್ತು. 2024ರ ಜನವರಿಗೆ ಸಿನಿಮಾ ತೆರೆಕಾಣಲಿದೆ.

ಪ್ರಜ್ವಲ್ ದೇವರಾಜ್ ಮತ್ತು ಅದಿತಿ ಪ್ರಭುದೇವ ನಟಿಸಿರುವ ‘ಮಾಫಿಯಾ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸಿದ್ದಾರೆ. ಈ ಸಿನಿಮಾ ರೆಡ್‌ ಮಾರ್ಕೆಟ್‌ ಬಗ್ಗೆ ಹೇಳಲಿದೆ. ಏನಿದು ರೆಡ್‌ ಮಾರ್ಕೆಟ್‌? ‘ಈವರೆಗೂ ಯಾರು ತೋರಿಸಿರದ ಮಾಫಿಯಾವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಿ.‌ ಆದರೆ ಇದೇ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕ ಲೋಹಿತ್‌. ‘ಪ್ರಜ್ವಲ್ ದೇವರಾಜ್ ಅಭಿನಯದ 35ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದ್ದೇವೆ’ ಎನ್ನುವುದು ನಿರ್ಮಾಪಕ ಬೆಂಗಳೂರು ಕುಮಾರ್‌ ಅವರ ಮಾತು.

ನಾಯಕನಟ ಪ್ರಜ್ವಲ್‌ ದೇವರಾಜ್‌ ಅವರಿಗೆ ಇದು 35ನೇ ಸಿನಿಮಾ. ತಮ್ಮ ಸಿನಿಮಾ ಜರ್ನೀ ಬಗ್ಗೆ ಮಾತನಾಡುವ ಅವರು, ‘ಸಿಕ್ಸರ್ ಚಿತ್ರದಿಂದ ನನ್ನ ಸಿನಿ ಜರ್ನಿ ಸಾಗಿಬಂದಿದೆ. ಮೂವತ್ತೈದು ಚಿತ್ರಗಳನ್ನು ಪೂರೈಸಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ. ಇನ್ನು ‘ಮಾಫಿಯಾ’ ಚಿತ್ರದ ಬಗ್ಗೆ ಹೇಳಬೇಕಾದರೆ, ಕುಮಾರ್ ಒಳ್ಳೆಯ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಲೋಹಿತ್ ಅವರ ವಯಸ್ಸು ಚಿಕ್ಕದಾದರೂ ಕೆಲಸದಲ್ಲಿ ಅಸಾಧಾರಣ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎನ್ನುತ್ತಾರೆ. ಅದಿತಿ ಪ್ರಭುದೇವ ಚಿತ್ರದ ನಾಯಕಿ. ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಪಾಂಡಿಕುಮಾರ್‌ ಛಾಯಾಗ್ರಹಣ, ಜಾಲಿ ಬಾಸ್ಟಿನ್‌ ಸಾಹಸ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here