ಲೋಹಿತ್‌ ನಿರ್ದೇಶನದಲ್ಲಿ ಪ್ರಜ್ವಲ್‌ ದೇವರಾಜ್‌ ನಟಿಸುತ್ತಿರುವ ‘ಮಾಫಿಯಾ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ.

ಪ್ರಜ್ವಲ್‌ ದೇವರಾಜ್‌ ಅಭಿನಯದ ‘ಮಾಫಿಯಾ’ ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ‌. ಚಿತ್ರದ ಟೀಸರ್ ಕೂಡ ಏಕಕಾಲಕ್ಕೆ ಬಿಡುಗಡೆಯಾಗಿದೆ. ಕನ್ನಡದಲ್ಲಿ ಧ್ರುವ ಸರ್ಜಾ, ಸತೀಶ್ ನೀನಾಸಂ ಹಾಗೂ ರಿಷಬ್ ಶೆಟ್ಟಿ, ತೆಲುಗಿನಲ್ಲಿ ಸುಧೀರ್ ಬಾಬು ಮತ್ತು ರಾಜಶೇಖರ್ ಹಾಗೂ ತಮಿಳಿನಲ್ಲಿ ಸತ್ಯರಾಜ್, ವೆಂಕಟ್ ಪ್ರಭು, ಪಾರ್ಥಿಬನ್ ಹಾಗೂ ನಿರ್ದೇಶಕ ಶಿಶೀಂದ್ರನ್ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸುತ್ತಿರುವ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಲೋಹಿತ್ ನಿರ್ದೇಶನದ ಚಿತ್ರದ ಆಡಿಯೋ ಹಕ್ಕು ಸಹ ಆನಂದ್ ಆಡಿಯೋಗೆ ದುಬಾರಿ ಮೊತ್ತಕ್ಕೆ ಮಾರಾಟವಾಗಿದೆ. ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದು, ಹಿರಿಯ ನಟ ದೇವರಾಜ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತರುಣ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಮಾಸ್ತಿ ಸಂಭಾಷಣೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here