‘ಪ್ರೇತ’ ಸಿನಿಮಾದ ‘ದೂರದ ಊರಿಗೆ’ ಲಿರಿಕಲ್‌ ಸಾಂಗ್‌ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತವಿರುವ ಗೀತೆಗೆ ನವೀನ್ ಸಜ್ಜು ದನಿಯಾಗಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಹರೀಶ್‌ ರಾಜ್‌ ಮೂರು ವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಈ ಹಿಂದೆ ಅವರು ‘ಕಲಾಕಾರ್’, ‘ಗನ್’, ‘ಶ್ರೀ ಸತ್ಯನಾರಾಯಣ’, ‘ಕಿಲಾಡಿ ಪೊಲೀಸ್’ ಚಿತ್ರಗಳನ್ನು ನಿರ್ದೇಶಿಸಿದ್ದರು. ಈಗ ಹಾರರ್‌ ‘ಪ್ರೇತ’ ಚಿತ್ರದೊಂದಿಗೆ ನಿರ್ದೇಶನಕ್ಕೆ ಮರಳಿದ್ದಾರೆ. ಕತೆ, ಚಿತ್ರಕಥೆಯೂ ಅವರದೆ. ಚಿತ್ರದ ಆಡಿಯೋ ಲಾಂಚ್‌ ಆಗಿದೆ. ಬೆಂಗಳೂರಿನಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಚಿವ ಭೈರತಿ ಸುರೇಶ್‌ ಅವರು ಆಡಿಯೋ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ‘ಕಾಂತಾರ’ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಸಮಾರಂಭದ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದರು. ಸಿನಿಮಾದ ‘ದೂರದ ಊರಿಗೆ’ ಹಾಡು HRP ಆಡಿಯೋ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತವಿರುವ ಗೀತೆಯನ್ನು ನವೀನ್ ಸಜ್ಜು ಹಾಡಿದ್ದಾರೆ. ಹರೀಶ್ ರಾಜ್ ಹಾಗೂ ಅಹಿರಾ ಶೆಟ್ಟಿ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

‘ಪ್ರೇತ’ ಸಿನಿಮಾ ಹರೀಶ್‌ ರಾಜ್‌ ಪ್ರೊಡಕ್ಷನ್‌ನ ಐದನೇ ಸಿನಿಮಾ. ಮೂಲ ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲೂ ಸಿನಿಮಾ ಬಿಡುಗಡೆ ಮಾಡುವುದು ಹರೀಶ್‌ ರಾಜ್‌ ಯೋಜನೆ. ವಿರಾಜಪೇಟೆ ಮತ್ತು ಮಡಿಕೇರಿ ಸುತ್ತಮುತ್ತ ಸಿನಿಮಾಗೆ ಚಿತ್ರೀಕರಣ ನಡೆದಿದೆ. ಅಹಿರಾ ಶೆಟ್ಟಿ, ಅಮಿತ್ ಚಿತ್ರದ ಇತರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕಿರಣ್ ಆರ್ ಹೆಮ್ಮಿಗೆ ಸಂಭಾಷಣೆ, ಶಿವಶಂಕರ್ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಮಂಜು ಕಲಾ ನಿರ್ದೇಶನ, ಪ್ರಮೋದ್ ಮರವಂತೆ ಸಾಹಿತ್ಯ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here