ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಚಿತ್ರರಂಗ ಹಾಗೂ ದಕ್ಷಿಣ ಭಾರತ ಚಿತ್ರರಂಗದ ಪ್ರಮುಖರು, ಡಾ.ರಾಜ್ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಚಿತ್ರರಂಗದ ಇತರೆ ಅಂಗಸಂಸ್ಥೆಗಳ ಸಹಯೋಗದಲ್ಲಿ ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ನಡೆಯಲಿದೆ. ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್‌ ನೀಡಿದ ಕೊಡುಗೆ, ಅವರ ಆದರ್ಶ, ಕೆಲಸಗಳನ್ನು ಸ್ಮರಿಸುವುದು, ಗೀತ ನಮನದೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಮಧ್ಯಾಹ್ನ ಮೂರು ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜಕುಮಾರ್ ಕುಟುಂಬದ ಸದಸ್ಯರು ಪಾಲ್ಗೊಳ್ಳುವರು.

ಮೈಸೂರು ಅರಸ ಮನೆತನದ ಯದುವೀರ ಒಡೆಯರ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಸಚಿವ ಸಂಪುಟದ ಹಲವು ಸಚಿವರು ಸೇರಿದಂತೆ ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು, ದಕ್ಷಿಣ ಭಾರತ ಚಿತ್ರರಂಗದ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಗಲಿದ ನಟನಿಗೆ ನಮನ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕನ್ನಡದ ಜನಪ್ರಿಯ ಹಿನ್ನೆಲೆ ಗಾಯಕರು ಪುನೀತ್ ರಾಜಕುಮಾರ್ ಸಿನಿಮಾಗಳ ಗೀತೆಗಳನ್ನು ಹಾಡಲಿದ್ದಾರೆ. ವಿ.ನಾಗೇಂದ್ರ ಪ್ರಸಾದ್ ರಚನೆ, ಗುರುಕಿರಣ್ ಸಂಗೀತ ಸಂಯೋಜನೆಯ ಪುನೀತ್ ರಾಜಕುಮಾರ್ ಅವರ ಕುರಿತ ಗೀತೆಯನ್ನು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು ಒಂದೂವರೆ ಸಾವಿರ ಜನರು ಪಾಲ್ಗೊಳ್ಳುತ್ತಿದ್ದು, ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ.

LEAVE A REPLY

Connect with

Please enter your comment!
Please enter your name here