‘Chef ಚಿದಂಬರ’ ಚಿತ್ರದಲ್ಲಿನ ರೇಚೆಲ್‌ ಡೇವಿಡ್‌ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಎಂ ಆನಂದರಾಜ್‌ ನಿರ್ದೇಶನದ ಈ ಸಿನಿಮಾದ ಹೀರೋ ಅನಿರುದ್ಧ. ಚಿತ್ರದ ಮತ್ತೊಬ್ಬ ನಾಯಕಿಯಾಗಿ ನಿಧಿ ಸುಬ್ಬಯ್ಯ ನಟಿಸುತ್ತಿದ್ದಾರೆ. ಸದ್ಯ ಚಿತ್ರವೀಗ ಪೋಸ್ಟ್‌ ಪ್ರೊಡಕ್ಷನ್‌ನಲ್ಲಿದೆ.

ಅನಿರುದ್ಧ ನಟನೆಯ ‘Chef ಚಿದಂಬರ’ ಚಿತ್ರದಲ್ಲಿನ ರೇಚೆಲ್‌ ಡೇವಿಡ್‌ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಎಂ ಆನಂದರಾಜ್ ನಿರ್ದೇಶನದ ಈ ಸಿನಿಮಾದಲ್ಲಿ ‘ಅನು’ ಪಾತ್ರದಲ್ಲಿ ರೇಚೆಲ್ ಡೇವಿಡ್ ಕಾಣಿಸಿಕೊಳ್ಳುತ್ತಿದ್ದಾರೆ. ರೇಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ‘chef ಚಿದಂಬರ’ ಸದ್ಯದಲ್ಲೇ ತೆರೆಯ ಮೇಲೆ ಬರಲಿದ್ದಾನೆ. ಪೋಸ್ಟರ್, ಕ್ಯಾರೆಕ್ಟರ್ ಟೀಸರ್ ಮೂಲಕ ಸಿನಿಮಾ ಸುದ್ದಿಯಾಗಿದೆ.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ ಎನ್ ನಿರ್ಮಿಸುತ್ತಿರುವ ಚಿತ್ರಕ್ಕೆ ನಿರ್ದೇಶಕರೇ ಕತೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ‘ವಿಕ್ರಾಂತ್ ರೋಣ’ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ, ಮಾಧುರಿ ಪರಶುರಾಮ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ರೇಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ ಎಸ್ ಶ್ರೀಧರ್‌, ಶಿವಮಣಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here