ವಿಜಯ ರಾಘವೇಂದ್ರ ಅವರ ನೂತನ ಥ್ರಿಲ್ಲರ್‌ ಸಿನಿಮಾ ‘ರಾಘು’ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಆನಂದ್‌ ರಾಜ್‌ ಚೊಚ್ಚಲ ನಿರ್ದೇಶನದ ಸಿನಿಮಾಗೆ ಸೂರಜ್‌ ಜೋಯಿಸ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಶುರು.

ನಟ ವಿಜಯ ರಾಘವೇಂದ್ರ ಅವರು ಹೊಸಬರೊಂದಿಗೆ ಸಿನಿಮಾ ಮಾಡಲು ಉತ್ಸುಕರಾಗಿರುತ್ತಾರೆ. ಸೋಲು, ಗೆಲುವಿನ ಬಗ್ಗೆ ಆಲೋಚಿಸದೆ ಪ್ರಯೋಗಗಳಿಗೆ ಹಾತೊರೆಯುವ ನಟ. ‘ಸೀತಾರಾಮ್ ಬಿನೋಯ್ ಕೇಸ್ ನಂಬರ್ 18’ ಸಿನಿಮಾ ಬಳಿಕ ಈಗ ಮತ್ತೊಮ್ಮೆ ಹೊಸಬರ ಜೊತೆ ಕೈ ಜೋಡಿಸಿದ್ದಾರೆ. ವಿಶೇಷವೆಂದರೆ ಈ ಸಿನಿಮಾ ಅವರ ಹೆಸರಿನಲ್ಲೇ ಶೀರ್ಷಿಕೆ ಹೊಂದಿದೆ. ಈ ನೂತನ ಸಿನಿಮಾ ‘ರಾಘು’ ಫಸ್ಟ್‌ಲುಕ್‌ ರಿವೀಲ್‌ ಆಗಿದೆ. ‘ಆನ’, ‘ಬ್ಯಾಂಗ್’ ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಆನಂದ್ ರಾಜ್ ಅವರು ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ನಿರ್ದೇಶನದ ಚೊಚ್ಚಲ ಸಿನಿಮಾ.

“‘ರಾಘು’ ಥ್ರಿಲ್ಲರ್ ಎಕ್ಸ್ ಪೆರಿಮೆಂಟಲ್ ಸಿನಿಮಾ. ಕನ್ನಡದಲ್ಲಿ ಇದೊಂದು ಹೊಸತನದ ಸಿನಿಮಾ ಆಗಲಿದ್ದು, ವಿಜಯ್ ರಾಘವೇಂದ್ರ ಹಿಂದೆಂದೂ ಮಾಡದ ವಿಭಿನ್ನ ಪಾತ್ರವೊಂದಕ್ಕೆ ಜೀವ ತುಂಬಲಿದ್ದಾರೆ” ಎಂದು ಹೇಳಿಕೊಳ್ಳುತ್ತಾರೆ ನಿರ್ದೇಶಕ ಆನಂದ್‌ ರಾಜ್‌. ಡಿಕೆಎಸ್ ಸ್ಟುಡಿಯೋಸ್ ಮತ್ತು ಕೋಟ ಫಿಲ್ಮಂ ಫ್ಯಾಕ್ಟರಿ ಬ್ಯಾನರ್‌ನಡಿ ರಣ್ವೀತ್‌ ಶಿವಕುಮಾರ್‌, ಅಭಿಷೇಕ್‌ ಕೋಟ ಚಿತ್ರ ನಿರ್ಮಿಸುತ್ತಿದ್ದಾರೆ. ‘ಬ್ಯಾಂಗ್’, ‘ಫ್ಯಾಮಿಲಿ ಪ್ಯಾಕ್’ ಖ್ಯಾತಿಯ ಉದಯ್‌ ಲೀಲಾ ಕ್ಯಾಮೆರಾ ವರ್ಕ್, ಸೂರಜ್‌ ಜೋಯಿಸ್‌ ಸಂಗೀತ ಸಂಯೋಜನೆ, ಅಥರ್ವ್ ಆರ್ಯ ಸಂಭಾಷಣೆ ರಚಿಸುತ್ತಿದ್ದಾರೆ. ಮೇ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ.

Previous articleಲೈಂಗಿಕ ಕಿರುಕುಳ ಆರೋಪ; ಕೊರಿಯೋಗ್ರಾಫರ್‌ ಗಣೇಶ್‌ ಆಚಾರ್ಯಗೆ ಚಾರ್ಜ್‌ಶೀಟ್‌
Next articleಯುಗಾದಿಗೆ ಸೆಟ್ಟೇರಲಿದೆ ‘ಟೈಗರ್‌ ನಾಗೇಶ್ವರರಾವ್‌’; ರವಿತೇಜಾ ಪ್ಯಾನ್‌ ಇಂಡಿಯಾ ಸಿನಿಮಾ

LEAVE A REPLY

Connect with

Please enter your comment!
Please enter your name here