ಕೋವಿಡ್‌ನಿಂದಾಗಿ ರಾಜಮೌಳಿ ನಿರ್ದೇಶನದ ‘RRR’ ಸಿನಿಮಾದ ಬಿಡುಗಡೆ ವಿಳಂಬವಾಗಿತ್ತು. ಈಗ ಮತ್ತೆ ಪ್ರೊಮೋಷನ್‌ ಶುರುವಾಗಲಿದ್ದು ಮಾರ್ಚ್‌ 14ರಂದು ಸಿನಿಮಾದ ‘ಜಂಡಾ’ ಸಾಂಗ್‌ ರಿಲೀಸ್‌ ಆಗಲಿದೆ. ಮಾರ್ಚ್‌ 25ರಂದು ಸಿನಿಮಾ ತೆರೆಕಾಣಲಿದೆ.

ಎಸ್.ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘RRR’ ಸಿನಿಮಾಗಾಗಿ ಚಿತ್ರರಸಿಕರು ಕಾತುರದಿಂದ ಎದುರು ನೋಡುತ್ತಿದ್ದಾರೆ. ‘ಬಾಹುಬಲಿ’ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿದ್ದು ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಜ್ಯೂನಿಯರ್‌ ಎನ್‌ಟಿಆರ್‌ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಬಾಲಿವುಡ್ ನಟರಾದ ಅಜಯ್ ದೇವಗನ್, ಅಲಿಯಾ ಭಟ್ ಸೇರಿದಂತೆ ಹಲವು ಪ್ರಮುಖ ನಟರು ‘RRR’ ಸಿನಿಮಾದಲ್ಲಿ ನಟಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲಾಗಲೇ ‘RRR’ ಸಿನಿಮಾ ತೆರೆಕಾಣಬೇಕಿತ್ತು. ಕೋವಿಡ್‌ನಿಂದಾಗಿ ರಿಲೀಸ್ ದಿನಾಂಕ ಪೋಸ್ಟ್‌ಪೋನ್ ಮಾಡಲಾಯ್ತು. ಹೀಗಾಗಿ ಎರಡು ಮುಹೂರ್ತ ಅನೌನ್ಸ್ ಮಾಡಿದ್ದ ರಾಜಮೌಳಿ ಆ ಎರಡು ದಿನಗಳನ್ನು ಬಿಟ್ಟು ಮಾರ್ಚ್ 25ಕ್ಕೆ ಅದ್ಧೂರಿಯಾಗಿ ತೆರೆಗೆ ಬರೋದಾಗಿ ಅನೌನ್ಸ್ ಮಾಡಿದರು. ಹೊಸ ದಿನಾಂಕ ಘೋಷಣೆ ಬಳಿಕ ರಾಜಮೌಳಿ ಟೀಂ ಪ್ರಮೋಷನ್ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಈಗ ಮತ್ತೆ ಪ್ರಮೋಷನ್ ಶುರುವಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ‘ದೋಸ್ತಿ’, ‘ಹಳ್ಳಿನಾಟು’ ಹಾಡುಗಳು ಸಿನಿಮಾದ ಕ್ರೇಜ್ ಹೆಚ್ಚಿಸಿದ್ದವು. ಇದೀಗ ‘RRR’ನ ಮತ್ತೊಂದು ಸಾಂಗ್‌ ಬಿಡುಗಡೆಯಾಗಲಿದೆ. ಮಾರ್ಚ್ 14ರಂದು ‘ಜಂಡಾ’ ಹಾಡು ರಿಲೀಸ್ ಮಾಡುವ ಮೂಲಕ ಪ್ರೊಮೋಷನ್‌ಗೆ ಮತ್ತೆ ಚಾಲನೆ ಸಿಗಲಿದೆ. ಡಿವಿವಿ ಎಂಟರ್‌ಟೇನ್‌ಮೆಂಟ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ರಿಲೀಸ್ ಆಗಲಿರುವ ಸಿನಿಮಾ ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ. ಬಿಗ್‌ ಬಜೆಟ್‌ ಸಿನಿಮಾಗೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಮಾರ್ಚ್ 25ರಂದು ‘RRR’ ಬಿಡುಗಡೆಯಾಗಲಿದೆ. ಸ್ಯಾಂಡಲ್‌ವುಡ್‌ನ ಕೆವಿಎನ್ ಪ್ರೊಡಕ್ಷನ್ ಹೌಸ್ ಈ ಸಿನಿಮಾವನ್ನು ಕರ್ನಾಟಕದಲ್ಲಿ ಹಂಚಿಕೆ ಮಾಡಲಿದೆ.

Previous articleಟ್ರೈಲರ್‌ | ವಿದ್ಯಾ ಬಾಲನ್‌ ‘ಜಲ್ಸಾ’; ಪ್ರೈಮ್‌ನಲ್ಲಿ ಸ್ಟ್ರೀಮ್‌ ಆಗಲಿದೆ ಸಿನಿಮಾ
Next articleBiffes | ‘ಪಿಂಕಿ ಎಲ್ಲಿ?’, ‘ದೊಡ್ಡಹಟ್ಟಿ ಬೋರೇಗೌಡ’ ಉತ್ತಮ ಸಿನಿಮಾಗಳು

LEAVE A REPLY

Connect with

Please enter your comment!
Please enter your name here