ರಜನೀಕಾಂತ್‌ ನೂತನ ತಮಿಳು ಸಿನಿಮಾಗೆ ಚಿತ್ರೀಕರಣ ಜಾರಿಯಲ್ಲಿದೆ. ಚಿತ್ರದ ವಿಶೇಷ ಪಾತ್ರದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಾಣಿಸಿಕೊಳ್ಳುತ್ತಿದ್ದು, ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ರಜನೀಕಾಂತ್‌ ಅವರು ಬಚ್ಚನ್‌ ಅವರೊಂದಿಗಿನ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ರಜನೀಕಾಂತ್‌ ನೂತನ ತಮಿಳು ಸಿನಿಮಾ ‘ತಲೈವರ್‌ 170’ ಚಿತ್ರೀಕರಣದಲ್ಲಿ ಬಾಲಿವುಡ್‌ ಹಿರಿಯ ನಟ ಅಮಿತಾಬ್‌ ಬಚ್ಚನ್‌ ಪಾಲ್ಗೊಂಡಿದ್ದಾರೆ. ರಜನೀಕಾಂತ್‌ ತಮ್ಮ X (Twitter) ಖಾತೆಯಲ್ಲಿ ಅಮಿತಾಬ್‌ ಬಚ್ಚನ್‌ ಅವರೊಂದಿಗಿನ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಚಿತ್ರವು ಕೆಲವು ವಾರಗಳ ಹಿಂದಷ್ಟೇ ಕೇರಳದಲ್ಲಿ ಚಿತ್ರೀಕರಣ ಪ್ರಾರಂಭಿಸಿದೆ. ರಜನೀಕಾಂತ್ ಅವರು ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದೀಗ ಬಿಗ್ ಬಿ ಜೊತೆಗಿನ ಚಿತ್ರವನ್ನು ರಜನಿ Xನಲ್ಲಿ ಹಂಚಿಕೊಂಡು ‘ಟಿ ಜೆ ಜ್ಞಾನವೇಲ್ ನಿರ್ದೇಶನದ Lyca Productions ನಿರ್ಮಾಣ ಮಾಡುತ್ತಿರುವ ‘ತಲೈವರ್ 170′ ಚಿತ್ರದಲ್ಲಿ 33 ವರ್ಷಗಳ ನಂತರ ನಾನು ನನ್ನ ಗುರು ಶ್ರೀ ಅಮಿತಾಬ್ ಬಚ್ಚನ್ ಅವರೊಂದಿಗೆ ಮತ್ತೆ ಕೆಲಸ ಮಾಡುತ್ತಿದ್ದೇನೆ. ನಾನು ತುಂಬಾ ಖುಷಿಯಾಗಿದ್ದೇನೆ’ ಎಂದು ಕಾಮೆಂಟ್‌ ಹಾಕಿದ್ದಾರೆ.

ರಜನೀಕಾಂತ್ ಅಭಿನಯದ ಇತ್ತೀಚಿನ ‘ಜೈಲರ್’ ಸಿನಿಮಾ ದೊಡ್ಡ ಹಿಟ್ ಆಗಿದೆ. ಸದ್ಯ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅವರ ಮುಂದಿನ 170ನೇ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಅದರಲ್ಲೂ ಅವರು ಅಮಿತಾಭ್ ಬಚ್ಚನ್ ಜೊತೆಗೆ ತೆರೆಹಂಚಿಕೊಳ್ಳುತ್ತಿರುವುದು ವಿಶೇಷ. ರಜಿನೀಕಾಂತ್‌ ಅವರ ಈ 170ನೇ ಸಿನಿಮಾವನ್ನು ‘ಜೈ ಭೀಮ್’ ಖ್ಯಾತಿಯ ಟಿ ಜೆ ಜ್ಞಾನವೇಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್, ದುಶರಾ ವಿಜಯನ್, ರಕ್ಷನ್, ಜಿ ಎಂ
ಸುಂದರ್‌ ಅಭಿನಯಿಸುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here