ಸೂಪರ್‌ ಹಿಟ್‌ ಕನ್ನಡ ಸಿನಿಮಾ ‘ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ’ ತೆಲುಗಿಗೆ ‘ಬಾಯ್ಸ್‌ ಹಾಸ್ಟೆಲ್‌’ ಶೀರ್ಷಿಕೆಯಡಿ ರೀಮೇಕಾಗಿದೆ. ಇಲ್ಲಿ ರಮ್ಯಾ ಅವರು ಮಾಡಿದ್ದ ಪಾತ್ರವನ್ನು ತೆಲುಗಿನಲ್ಲಿ ರಶ್ಮಿ ಗೌತಮ್‌ ನಿರ್ವಹಿಸುತ್ತಿದ್ದಾರೆ. ಆಗಸ್ಟ್‌ 26ರಂದು ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾ ತೆರೆಕಾಣಲಿದೆ.

ಕನ್ನಡದ ಸೂಪರ್ ಹಿಟ್ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ತೆಲುಗಿಗೆ ಡಬ್ ಆಗಿದೆ. ಇದೇ 26ಕ್ಕೆ ಆಂಧ್ರ ಮತ್ತು ತೆಲಂಗಾಣದಲ್ಲಿ ‘ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಡಿ ತೆಲುಗು ಅವತರಣಿಕೆ ಬಿಡುಗಡೆಯಾಗಲಿದೆ. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್, ಶೈನಿ ಶೆಟ್ಟಿ ಹಾಗೂ ಪವನ್ ಕುಮಾರ್ ಹಾಗೂ ರಮ್ಯಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಮ್ಯಾ ಮಾಡಿದ್ದ ಲೆಕ್ಚರರ್ ಪಾತ್ರವನ್ನು ತೆಲುಗಿನಲ್ಲಿ ನಟಿ – ನಿರೂಪಕಿ ರಶ್ಮಿ ಗೌತಮ್ ಮಾಡಲಿದ್ದಾರೆ.

ತೆಲುಗಿಗೆ ಡಬ್ ಆಗಿರುವ ‘ಬಾಯ್ಸ್ ಹಾಸ್ಟೆಲ್’ ಸಿನಿಮಾದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಎಂಟಿಆರ್ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ಹಾಡು ರಿಲೀಸ್ ಆಗಿದ್ದು, ತೆಲುಗು ಸಿನಿಪ್ರಿಯರಿಂದ ಉತ್ತಮ ರೆಸ್ಪಾನ್ಸ್‌ ಪಡೆದುಕೊಂಡಿದೆ ಎನ್ನುತ್ತದೆ ಚಿತ್ರತಂಡ. ನಿತಿನ್ ಕೃಷ್ಣಮೂರ್ತಿ ಚೊಚ್ಚಲ ನಿರ್ದೇಶನದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ರಾಜ್ಯ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯಗಳು ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕಾಮಿಡಿ, ತರ್ಲೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಟ್ಟಿತ್ತು. ಇದೀಗ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳದಲ್ಲಿ ‘ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಡಿ ತೆಲುಗು ಭಾಷೆಗೆ ಡಬ್ ಆಗುತ್ತಿದೆ.

ಚಾಯ್ ಬಿಸ್ಕೆಟ್ ಫಿಲ್ಮ್ಸ್ ಮತ್ತು ಅನ್ನಪೂರ್ಣ ಸ್ಟುಡಿಯೋಸ್ ಜಂಟಿಯಾಗಿ ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಚಿತ್ರವನ್ನು ಆಗಸ್ಟ್ 26ರಂದು ಬಿಡುಗಡೆ ಮಾಡುತ್ತಿವೆ. ಕನ್ನಡದಲ್ಲಿ ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ತಮ್ಮ ಪರವಃ ಪಿಕ್ಚರ್ಸ್ ಬ್ಯಾನರ್‌ ಅಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದಾರೆ. ಗುಲ್‌ಮೊಹರ್‌ ಫಿಲ್ಮ್ಸ್ ಮತ್ತು ವರುಣ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

Previous article‘ಜಿಲೇಬಿ’ ಟ್ರೈಲರ್‌ | ವಿಜಯ ಭಾಸ್ಕರ್‌ ತೆಲುಗು ಸಿನಿಮಾ ಆಗಸ್ಟ್‌ 18ರಂದು ತೆರೆಗೆ
Next article‘RDX’ ಟ್ರೈಲರ್‌ | ಶೇನ್‌, ಆಂಟೋನಿ, ನೀರಜ್‌ ಮಾಧವ್‌ ಮಲಯಾಳಂ ಸಿನಿಮಾ

LEAVE A REPLY

Connect with

Please enter your comment!
Please enter your name here