ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಶೇಖರ್‌ ಕಮ್ಮುಲ ನಿರ್ದೇಶನದ ‘ಕುಬೇರ’ ತಮಿಳು ಸಿನಿಮಾದಲ್ಲಿನ ರಶ್ಮಿಕಾ ಮಂದಣ್ಣ ಅವರ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ಧನುಷ್‌ ಹೀರೋ ಆಗಿ ನಟಿಸುತ್ತಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತೆಲುಗು ನಟ ನಾಗಾರ್ಜುನ ಅಭಿನಯಿಸುತ್ತಿದ್ದಾರೆ.

ಧನುಷ್‌ ನಟನೆಯ ‘ಕುಬೇರ’ ತಮಿಳು ಸಿನಿಮಾದಲ್ಲಿನ ನಟಿ ರಶ್ಮಿಕಾ ಮಂದಣ್ಣ ಅವರ ಫಸ್ಟ್‌ಲುಕ್‌ ರಿಲೀಸ್‌ ಆಗಿದೆ. ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ನಿರ್ದೇಶನದ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತೆಲುಗು ನಟ ನಾಗಾರ್ಜುನ ಅಭಿನಯಿಸುತ್ತಿದ್ದಾರೆ. ಚಿತ್ರತಂಡ ರಶ್ಮಿಕಾ ಅವರ ಫಸ್ಟ್‌ಲುಕ್‌ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಹಂಚಿಕೊಂಡಿದೆ. ರಶ್ಮಿಕಾ ಸರಳ ಯುವತಿಯಂತೆ ಕಾಣಿಸಿಕೊಂಡಿದ್ದು, ಪಾತ್ರದ ಬಗ್ಗೆ ಅವರ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಫಸ್ಟ್‌ಲುಕ್‌ ಜೊತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಅನ್ನು ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದ ಈ ವೀಡಿಯೋದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮತ್ತು ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್‌ನಡಿಯಲ್ಲಿ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ನಿರ್ಮಿಸುತ್ತಿರುವ ಚಿತ್ರಕ್ಕೆ ದೇವಿಶ್ರೀ ಪ್ರಸಾದ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಸಿನಿಮಾ ಚಿತ್ರೀಕರಣವಾಗುತ್ತಿದೆ.

LEAVE A REPLY

Connect with

Please enter your comment!
Please enter your name here