ರಶ್ಮಿಕಾ ಮಂದಣ್ಣ ಅಭಿನಯದ ‘ದಿ ಗರ್ಲ್‌ಫ್ರೆಂಡ್‌’ ನೂತನ ತೆಲುಗು ಸಿನಿಮಾ ಸೆಟ್ಟೇರಿದೆ. ರಾಹುಲ್‌ ರವೀಂದ್ರನ್‌ ನಿರ್ದೇಶಿಸುತ್ತಿರುವ ಸಿನಿಮಾಗೆ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಿತ್ರಕಥೆಯಲ್ಲಿ ರಶ್ಮಿಕಾ ಪಾತ್ರವೇ ಪ್ರಧಾನವಾಗಿದ್ದು ಹೀರೋ ಯಾರೆನ್ನುವ ಮಾಹಿತಿ ಕೆಲವೇ ದಿನಗಳಲ್ಲಿ ಹೊರಬೀಳಲಿದೆ.

‘ಅನಿಮಲ್‌’ ಸಿನಿಮಾದ ಯಶಸ್ಸಿನಲ್ಲಿರುವ ರಶ್ಮಿಕಾ ಇದೀಗ ನೂತನ ತೆಲುಗು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ದಿ ಗರ್ಲ್‌ಫ್ರೆಂಡ್‌’ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾವನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ರಾಹುಲ್ ರವೀಂದ್ರನ್ ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ನಿನ್ನೆ (ಡಿಸೆಂಬರ್‌ 6) ಹೈದರಾಬಾದ್‌ನ ಗಚ್ಚಿಬೌಲಿ ಪ್ರದೇಶದ ಕಾಲೇಜೊಂದರಲ್ಲಿ ಒಂದರಲ್ಲಿ ರಶ್ಮಿಕಾ ಅವರನ್ನು ಪರಿಚಯಿಸುವ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ಇದರಲ್ಲಿ ಇವರು ಕಾಲೇಜು ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Mass Movie Makers ಮತ್ತು Dheeraj Mogilineni Entertainment ಬ್ಯಾನರ್‌ ಅಡಿಯಲ್ಲಿ ರಾಹುಲ್ ರವೀಂದ್ರನ್ ಮತ್ತು ಅಲ್ಲು ಅರವಿಂದ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಮೊದಲ ಶೆಡ್ಯೂಲ್ 20 ದಿನಗಳ ಕಾಲ ಇರಲಿದ್ದು, ರಶ್ಮಿಕಾ ಜೊತೆಗೆ ಪ್ರಮುಖ ನಟರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಕೃಷ್ಣನ್ ವಸಂತ್ ಛಾಯಾಗ್ರಹಣ, ಹೇಶಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ. ಚಿತ್ರದ ಕುರಿತು ಇತರೆ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ.

LEAVE A REPLY

Connect with

Please enter your comment!
Please enter your name here