‘ರತ್ನ’ ಇದು ಅಪ್ಪಟ ಪುನೀತ್‌ ರಾಜಕುಮಾರ್‌ ಅಭಿಮಾನಿಯ ಸಿನಿಮಾ. ಪುನೀತ್‌ ರಾಜಕುಮಾರ್‌ ಹುಟ್ಟುಹಬ್ಬಂದು ಈ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲಾಗಿತ್ತು. ಈಗ ಚಿತ್ರದ ಹಾಡುಗಳನ್ನು ರಿಲೀಸ್‌ ಮಾಡಲಾಗಿದೆ.

ಬಸವರಾಜ್ ಬಳ್ಳಾರಿ ಅವರು ನಿರ್ಮಿಸಿ – ನಿರ್ದೇಶಿಸಿರುವ ಸಿನಿಮಾ ‘ರತ್ನ’. ಇತ್ತೀಚೆಗಷ್ಟೇ ಚಿತ್ರತಂಡ ಸಿನಿಮಾದ ಟ್ರೇಲರ್‌ ಬಿಡುಗಡೆ ಮಾಡಿತ್ತು. ಅಪ್ಪು ಹುಟ್ಟುಹಬ್ಬದಂದು ರಿಲೀಸ್‌ ಆಗಿದ್ದ ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ಸಹ ಸಿಕ್ಕಿತ್ತು. ಈಗ ಚಿತ್ರತಂಡ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಿನಿಮಾ ಹಾಡುಗಳನ್ನ ರಿಲೀಸ್‌ ಮಾಡಿದೆ. ಅದರಲ್ಲೂ ಪುನೀತ್‌ ರಾಜಕುಮಾರ್‌ ಅಭಿಮಾನಿಗಳಿಂದ ಅನ್ನೋದು ವಿಶೇಷ. ‘ರತ್ನ’ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿವೆ. ಒಂದೊಂದು ಹಾಡನ್ನೂ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಹಾಗೂ ಅವರ ಆಪ್ತರು ಬಿಡುಗಡೆ ಮಾಡಿದ್ದು ವಿಶೇಷ. ಅಪ್ಪು ವೆಂಕಟೇಶ್, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಪುನೀತ್ ಅವರ ಅಂಗರಕ್ಷಕರಾಗಿದ್ದ ಚಲಪತಿ, ಹುಬ್ಳಳಿಯಿಂದ ಬಂದಿದ್ದ ರಘುಪತಿ ಹಾಗೂ ಮಾರುತಿ ಹಾಡುಗಳನ್ನು ಬಿಡುಗಡೆ ಮಾಡಿದರು.

‘ಪುನೀತ್ ರಾಜಕುಮಾರ್ ಅವರು ನನಗೆ ಮಾಡಿರುವ ಸಹಾಯ ಅಷ್ಟಿಷ್ಟಲ್ಲ. ಅವರ ಒಳ್ಳೆಯ ಗುಣಗಳೇ, ನನಗೆ ಈ ಚಿತ್ರ ಮಾಡಲು ಸ್ಪೂರ್ತಿ. ನಾನು ಕೂಡ ಅವರ ಅಪ್ಪಟ್ಟ ಅಭಿಮಾನಿ. ಅಪ್ಪು ಅವರನ್ನು ಜನ ಎಷ್ಟು ಪ್ರೀತಿಸುತ್ತಾರೆ ಎನ್ನುವುದಕ್ಕೆ ಈ ಚಿತ್ರ ನೋಡಬೇಕು. ಇದು ಅಪ್ಪು ಅಭಿಮಾನಿ ಕುರಿತಾದ ಚಿತ್ರ. ಸತೀಶ್ ಬಾಬು ಅವರು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಅಭಿಮಾನಿಗಳಿಗೆ ನನ್ನ ಧನ್ಯವಾದ’ ಎಂದ ಬಸವರಾಜ್ ಬಳ್ಳಾರಿ ಸಿನಿಮಾವನ್ನು ಪ್ರೋತ್ಸಾಹಿಸುವಂತೆ ಕೋರಿದ್ದಾರೆ. ಇದೇ ತಿಂಗಳು ಏಪ್ರಿಲ್ 19 ಚಿತ್ರ ಬಿಡುಗಡೆಯಾಗಲಿದೆ. ಹರ್ಷಲ ಹನಿ, ವರ್ಧನ್, ಆನಂದ್ ಅಪ್ಪು, ಬಾಲರಾಜ್ ಒಡೆಯರ್, ನಾಗೇಂದ್ರ ಅರಸ್, ಅಮಿತ್ ರಾವ್,ವಿಜಯ್ ಚಂಡೂರ್. ಮಹೇಶ್ ಬಾಬು.ಸಾರಿಕಮ್ಮ, ರಾಣಿ ಬಸವರಾಜ್, ಸುಚಿತ್ ಚೌವ್ಹಾಣ್, ರಾಮು ಕರೂರ್ ಚಿತ್ರದ ತಾರಾಬಳಗದಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here