ಬಿಗ್‌ಬಾಸ್‌ ಖ್ಯಾತಿಯ ನಟ ರೂಪೇಶ್‌ ಶೆಟ್ಟಿ ‘ಸನ್ನಿಧಾನಮ್ P O’ ತಮಿಳು ಚಿತ್ರದ ಮೂಲಕ ಕಾಲಿವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಅಮುತ ಸಾರಥಿ ನಿರ್ದೇಶಿಸುತ್ತಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಯೋಗಿಬಾಬು ಕಾಣಿಸಿಕೊಳ್ಳುತ್ತಿದ್ದಾರೆ.

‘ಸರ್ಕಸ್’ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಯಶಸ್ಸು ಕಂಡಿದ್ದ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ‘ಸನ್ನಿಧಾನಮ್ P O’ ಶೀರ್ಷಿಕೆಯ ತಮಿಳು ಸಿನಿಮಾದಲ್ಲಿ ರೂಪೇಶ್ ನಟಿಸಲಿದ್ದು, ಅಮುತ ಸಾರಥಿ ಅವರು ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಮಧುರಾವ್ ಅವರು ಈ ಸಿನಿಮಾ ನಿರ್ಮಿಸುತ್ತಿದ್ದು, ಈಗಾಗಲೇ ಚಿತ್ರದ ಎರಡನೇ ಹಂತದ ಚಿತ್ರೀಕರಣದ ನಡೆಯುತ್ತಿದೆ. ಜೂನ್‌ನಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ತಯಾರಿ ನಡೆಸುತ್ತಿದ್ದು, ಒಟ್ಟು ನಾಲ್ಕು ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಸಿತಾರಾ, ಮೇನಕಾ ಮತ್ತು ವರ್ಷಾ ವಿಶ್ವನಾಥ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ತುಳು ಚಿತ್ರರಂಗದಲ್ಲಿ ನಾನಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಾ, ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ ರೂಪೇಶ್ ಶೆಟ್ಟಿ. ‘ಬಿಗ್‌ಬಾಸ್’ ಸೀಸನ್‌ 9ರ ವಿಜೇತರಾಗಿ ಹೊರಹೊಮ್ಮಿದ್ದರು. ರೂಪೇಶ್ ಅವರು ತುಳು, ಕನ್ನಡ ಚಿತ್ರಗಳಲ್ಲಿ ಮಾತ್ರವಲ್ಲದೇ ತೆಲುಗು, ಕೊಂಕಣಿ ಭಾಷೆಯ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ತಮಿಳು ಸಿನಿರಂಗದ ಹಾಸ್ಯ ದಿಗ್ಗಜ ಯೋಗಿಬಾಬು ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಅವರ ಜೊತೆ ತೆರೆ ಹಂಚಿಕೊಳ್ಳುತ್ತಿರುವ ಸಂತಸದಲ್ಲಿದ್ದಾರೆ ರೂಪೇಶ್. ‘ಅಧಿಪತ್ರ’ ಚಿತ್ರದ ಜೊತೆಗೆ ಮತ್ತೆರೆಡು ಹೊಸ ಕನ್ನಡ ಸಿನಿಮಾಗಳಲ್ಲಿಯೂ ಇವರು ಕಾಣಿಸಿಕೊಳ್ಳಲಿದ್ದಾರೆ.

LEAVE A REPLY

Connect with

Please enter your comment!
Please enter your name here