‘ಅವನೇ ಶ್ರೀಮನ್ನಾರಾಯಣ’ ಖ್ಯಾತಿಯ ಸಚಿನ್‌ ನಿರ್ದೇಶನದ ಸ್ಪೈ – ಥ್ರಿಲ್ಲರ್‌ ಸಿನಿಮಾದಲ್ಲಿ ಶಿವರಾಜಕುಮಾರ್‌ ನಟಿಸಲಿದ್ದಾರೆ. ಮಹಾಭಾರತದ ಅಶ್ವತ್ಥಾಮನ ಪಾತ್ರದಲ್ಲಿ ಶಿವರಾಜ್‌ ನಟಿಸಲಿದ್ದು, ಸೆಪ್ಟೆಂಬರ್‌ನಿಂದ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ.

‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ನಿರ್ದೇಶಕ ಸಚಿನ್‌ ರವಿ ಹೊಸ ಸಿನಿಮಾ ಘೋಷಿಸಿದ್ದಾರೆ. ಅವರ ನಿರ್ದೇಶನದ ಸಿನಿಮಾದಲ್ಲಿ ಶಿವರಾಜಕುಮಾರ್‌ ಮಹಾಭಾರತದ ಅಶ್ವತ್ಥಾಮನಾಗಿ ಬಣ್ಣ ಹಚ್ಚಲಿದ್ದು, ಇದೊಂದು ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರ ಚಿತ್ರವಾಗಲಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸಚಿನ್ ಈ ಸಿನಿಮಾದ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪೆನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಸದ್ಯದಲ್ಲಿಯೇ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕಾನ್ಸೆಪ್ಟ್‌ನ ಸಿನಿಮಾಗಳು ವಿರಳ. ಆ ನಿಟ್ಟಿನಲ್ಲಿ ಶಿವರಾಜ್‌ ವೃತ್ತಿ ಬದುಕಿನಲ್ಲಿ ಇದು ವಿಶಿಷ್ಟ ಪಾತ್ರವಾಗಲಿದೆ. ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಸಿನಿಮಾ ಬಗ್ಗೆ ಸಚಿನ್‌ ಹೆಚ್ಚು ಗುಟ್ಟು ಬಿಟ್ಟುಕೊಡುತ್ತಿಲ್ಲ. ಮುಂದಿನ ದಿನಗಳಲ್ಲಿ ಚಿತ್ರತಂಡ ಇನ್ನುಳಿದ ಕಲಾವಿದರು ಹಾಗೂ ತಂತ್ರಜ್ಞರನ್ನು ಪರಿಚಯಿಸಲಿದ್ದು, ಸೆಪ್ಟೆಂಬರ್‌ನಿಂದ ಶೂಟಿಂಗ್‌ ಶುರುವಾಗಲಿದೆ.

Previous articleಕೋಮುವಾದದ ವಿಭಜನೆಯನ್ನು ವಿಡಂಬನಾತ್ಮಕವಾಗಿ ಅನಾವರಣಗೊಳಿಸುವ ‘ರಂಡು’
Next articleಆವರಿಸುವ ಚಿತ್ರಕಥೆ, ಮರುಗಿಸುವ ಕತೆಯ ಥ್ರಿಲ್ಲರ್ ‘ಅಂತಾಕ್ಷರಿ’

LEAVE A REPLY

Connect with

Please enter your comment!
Please enter your name here