‘ಸಿಂಪಲ್ ಆಗಿ‌ ಒಂದು ಲವ್ ಸ್ಟೋರಿ’ ಸಿನಿಮಾ ಯಶಸ್ಸಿನ ನಂತರ ‘ಸಿಂಪಲ್‌ ಸುನಿ’ ಎಂದೇ ಕರೆಸಿಕೊಂಡವರು ನಿರ್ದೇಶಕ ಸುನಿ. ಸರಳ ಕತೆಗಳನ್ನು ತೆರೆಗೆ ಅಳವಡಿಸುವಲ್ಲಿ ಅವರದ್ದೇ ಒಂದು ಗ್ರಾಮರ್ ಕಂಡುಕೊಂಡಿದ್ದಾರೆ. ಇದೀಗ ತಮ್ಮ ‘ಸಖತ್‌’ ಸಿನಿಮಾ ಪ್ರೊಮೋಷನ್‌ಗೊಂದು ವಿಶಿಷ್ಟ ಐಡಿಯಾ ಮಾಡಿದ್ದಾರೆ.

ನಿರ್ದೇಶಕ ಸಿಂಪಲ್ ಸುನಿ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ! ಇದು ‘ಸಖತ್’ ಪ್ರಮೋಷನ್ಸ್. ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಷನ್ ಚಿತ್ರವಿದು. ಈ ಜೋಡಿ ಜೊತೆಯಾಗಿ ಪ್ರೇಕ್ಷಕರಿಗೆ ಕಾಮಿಡಿ ಹೂರಣ ಬಡಿಸಲು ಸಜ್ಜಾಗಿದ್ದಾರೆ. ಈಗಾಗ್ಲೇ ರಿಲೀಸ್ ಆಗಿರುವ‌ ಸಖತ್ ಸಿನಿಮಾದ ಮೋಷನ್ ಪೋಸ್ಟರ್, ಟೀಸರ್ ಹಾಗೂ ಸಾಂಗ್ ಕುತೂಹಲ ಸೃಷ್ಟಿಸಿವೆ. ಈ ನಡುವೆ ಸಖತ್ ಸಿನಿಮಾ ಬಳಗ ಪ್ರಮೋಷನ್‌ಗೆ ಒಂದು ವಿಶಿಷ್ಟ ಐಡಿಯಾ ಮಾಡಿದೆ. ಮಾಲ್‌ಗಳಲ್ಲಿ ಕೋರ್ಟ್ ಕಟಕಟೆ ನಿರ್ಮಿಸಿದ್ದಾರೆ.

ಅಷ್ಟಕ್ಕೂ ಸಖತ್ ಸಿನಿಮಾಕ್ಕೂ ಕೋರ್ಟ್ ಕಟಕಟೆಗೂ ಏನು ಸಂಬಂಧ ಅಂದ್ರೆ ಸಖತ್ ಸಿನಿಮಾದ ಟೀಸರ್‌ನಲ್ಲಿ ಕೋರ್ಟ್ ಸೀನ್ ಇದೆ. ಗಣೇಶ್ ಕೋರ್ಟ್ ಕಟಕಟೆಯಲ್ಲಿ ನಿಂತು ನಟಿಸಿರುವ ಒಂದು ದೃಶ್ಯವಿದೆ. ಅಲ್ಲದೇ ಸಖತ್ ಸಿನಿಮಾ ಕೋರ್ಟ್ ಸುತ್ತ ನಡೆಯುವ ಕಥೆ. ಹೀಗಾಗಿ ಚಿತ್ರತಂಡ ಪ್ರಮೋಷನ್‌ಗೆ ಈ ವಿಧಾನ‌ ಬಳಸಿದೆ. ಮಾಲ್ ಅಂಗಳದಲ್ಲಿ‌‌ ಕೋರ್ಟ್ ಕಟಕಟೆ ನಿರ್ಮಿಸಿದೆ ಸಖತ್ ಸಿನಿಮಾ ತಂಡ. ಈ ಕಟಕಟೆಯಲ್ಲಿ ನಿಂತು ಮಕ್ಕಳು, ಪ್ರತಿಯೊಬ್ಬರು ಫೋಟೋಗೆ ಫೋಸ್ ಕೊಡ್ತಿದ್ದಾರೆ. ಬರೋ 14 ರಂದು ಸಖತ್ ಸಿನಿಮಾದ ಟೈಟಲ್ ಸಾಂಗ್‌ ರಿಲೀಸ್ ಆಗ್ತಿದೆ. ಕಾಮಿಡಿ ಜೊತೆ ರಿಯಾಲಿಟಿ ಸುತ್ತ ಎಣೆಯಲಾಗಿರುವ ಸಖತ್ ಸಿನಿಮಾದಲ್ಲಿ ಗಣೇಶ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಹಾಗೂ ಸುರಭಿ ನಟಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧುಕೋಕಿಲ, ಧರ್ಮಣ್ಣ ಕಡೂರು ಸೇರಿದಂತೆ ಮುಂತಾದವರು ಪೋಷಕ ಪಾತ್ರಗಳಲ್ಲಿದ್ದಾರೆ. ಕೆವಿಎನ್ ಪ್ರೊಡಕ್ಷನ್‌ನಡಿ ಅದ್ಧೂರಿಯಾಗಿ ತಯಾರಾಗಿರುವ ಸಿನಿಮಾಗೆ ನಿಶಾ ವೆಂಕಟ್ ಕೋನಾಂಕಿ ಹಾಗೂ ಸುಪ್ರಿತ್ ಬಂಡವಾಳ ಹೂಡಿದ್ದಾರೆ. ನವೆಂಬರ್ 26ರಂದು ಸಿನಿಮಾ ತೆರೆಕಾಣಲಿದೆ.

LEAVE A REPLY

Connect with

Please enter your comment!
Please enter your name here