ಸಮಂತಾ ಮುಖ್ಯಭೂಮಿಕೆಯ ‘ಯಶೋದಾ’ ಥ್ರಿಲ್ಲರ್‌ ಸಿನಿಮಾ ಆಗಸ್ಟ್‌ 12ರಂದು ತೆರೆಕಾಣಲಿದ್ದು, ಗ್ಲಿಮ್ಸಸ್‌ ರಿಲೀಸ್‌ ಆಗಿದೆ. ಮೂಲ ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎನ್ನುವುದು ವಿಶೇಷ.

ಸಮಂತಾ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಯಶೋದಾ’ ವೀಡಿಯೋ ಗ್ಲಿಮ್ಸಸ್‌ ರಿಲೀಸ್‌ ಆಗಿದೆ. ಸದ್ಯ ಸಿನಿಮಾ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. “ಫ್ಯಾಮಿಲಿ ಮ್ಯಾನ್‌ 2 ವೆಬ್‌ ಸಿರೀಸ್‌ ಮೂಲಕ ಸಮಂತಾ ಪ್ಯಾನ್‌ ಇಂಡಿಯಾ ಜನರನ್ನು ತಲುಪಿದ್ದಾರೆ. ಆ ಒಂದು ಕಾರಣಕ್ಕೆ ಎಲ್ಲಿಯೂ ಕಾಂಪ್ರಮೈಸ್‌ ಆಗದೇ, ಎಲ್ಲೆಡೆ ಸಲ್ಲುವ ಸಿನಿಮಾ ಮಾಡಿದ್ದೇವೆ. ಈ ಸಿನಿಮಾದಲ್ಲಿನ ಸಮಂತಾ ಅವರ ಡೆಡಿಕೇಷನ್‌ ತೆರೆಮೇಲೆ ಕಾಣಿಸಲಿದೆ. ಅವರ ನಟನೆಯನ್ನು ನೋಡುವುದೇ ಚಂದʼ ಎನ್ನುತ್ತಾರೆ ಚಿತ್ರದ ನಿರ್ದೇಶಕರು. ಹರಿ ಮತ್ತು ಹರೀಶ್‌ ನಿರ್ದೇಶನದ ಚಿತ್ರವನ್ನು ಶಿವಲೆಂಕಾ ಕೃಷ್ಣ ಪ್ರಸಾದ್‌ ನಿರ್ಮಿಸಿದ್ದಾರೆ. ಮೂಲ ತೆಲುಗು ಮತ್ತು ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಡಬ್ಬಿಂಗ್‌ ಅವತರಣಿಕೆಗಳಲ್ಲಿ ಆಗಸ್ಟ್‌ 12ರಂದು ಸಿನಿಮಾ ತೆರೆಕಾಣಲಿದೆ.

ಚಿತ್ರೀಕರಣದ ಬಗ್ಗೆ ಮಾಹಿತಿ ನೀಡುವ ನಿರ್ದೇಶಕರು, “ಚಿತ್ರದ ಕ್ಲೈಮ್ಯಾಕ್ಸ್‌ ಹಂತವನ್ನು ಕೊಡೈಕೆನಾಲ್‌ನಲ್ಲಿ ಚಿತ್ರೀಕರಿಸಿದ್ದೇವೆ. ಶೇ.80ರಷ್ಟು ಶೂಟಿಂಗ್‌ ಮುಕ್ತಾಯವಾಗಿದ್ದು, ಹೈದರಾಬಾದ್‌ನಲ್ಲಿ ಕೊನೆಯ ಶೆಡ್ಯೂಲ್‌ ನಡೆಯುತ್ತಿದೆ. ಜೂನ್‌ 1ಕ್ಕೆ ಶೂಟ್‌ ಮುಗಿಸಲಿದ್ದೇವೆ. ಇಡೀ ಸಿನಿಮಾದಲ್ಲಿ ಗ್ರಾಫಿಕ್ಸ್‌ ಕೆಲಸ ಪ್ರಮುಖ ಪಾತ್ರ ವಹಿಸಲಿದೆ. ನಿರ್ದೇಶಕರ ಕೆಲಸವೂ ಇಂಪ್ರೆಸಿವ್‌ ಆಗಿದೆ” ಎನ್ನುತ್ತಾರೆ. ಚಿತ್ರದಲ್ಲಿ ವರಲಕ್ಷ್ಮೀ ಶರತ್‌ ಕುಮಾರ್‌, ಉನ್ನಿ ಮುಕುಂದನ್‌, ರಾವ್‌ ರಮೇಶ್‌, ಮುರಳಿ ಶರ್ಮಾ, ಸಂಪತ್‌ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್‌, ದಿವ್ಯಾ ಶ್ರೀಪಾದ್‌, ಪ್ರಿಯಾಂಕಾ ಶರ್ಮಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಮಣಿಶರ್ಮ ಸಂಗೀತ, ಪಲ್ಗುಮ್‌ ಚಿನ್ನರಾಯನ ಮತ್ತು ಡಾ. ಚಲ್ಲ ಭಾಗ್ಯಲಕ್ಷ್ಮಿ ಸಂಭಾಷಣೆ, ಚಂದ್ರಬೋಸ್‌ ರಾಮಜೋಗಯ್ಯ ಶಾಸ್ತ್ರಿ ಸಾಹಿತ್ಯ, ಎಂ. ಸುಕುಮಾರ್‌ ಛಾಯಾಗ್ರಹಣ, ಮಾರ್ತಾಂಡ್‌ ವೆಂಕಟೇಶ್‌ ಸಂಕಲನ ಚಿತ್ರಕ್ಕಿದೆ.

Previous articleಮಕ್ಕಳ ಜತೆ ಕುಳಿತು ಆನಂದಿಸಬೇಕಾದ ಸಿನಿಮಾ ‘ಓ ಮೈ ಡಾಗ್’
Next article‘LOOK BACK’; ರಂಜನ್‌ ಮುಲ್ಲರಟ್‌ ನಿರ್ದೇಶನದ ಕಲರಿಯಪಟ್ಟು ಸಿನಿಮಾ

LEAVE A REPLY

Connect with

Please enter your comment!
Please enter your name here