ಹೇಮಂತರಾವ್‌ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಎರಡು ಪಾರ್ಟ್‌ಗಳಲ್ಲಿ ತೆರೆಕಾಣಲಿದೆ ಎನ್ನುವ ಸುದ್ದಿ ಮೊನ್ನೆ ಸಿಕ್ಕಿತ್ತು. ಇಂದು ಬಿಡುಗಡೆ ದಿನಾಂಕಗಳು ಘೋಷಣೆಯಾಗಿವೆ. ‘ಸೈಡ್‌ A’ ಸೆಪ್ಟೆಂಬರ್‌ 1ರಂದು ಮತ್ತು ‘ಸೈಡ್‌ B’ ಅಕ್ಟೋಬರ್‌ 20ರಂದು ಬಿಡುಗಡೆಯಾಗಲಿದೆ.

‘ಕವಲು ದಾರಿ’ ನಂತರ ಹೇಮಂತ್ ರಾವ್ ನಿರ್ದೇಶಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಕನ್ನಡದ ಬಹುನಿರೀಕ್ಷಿತ ಚಿತ್ರಗಳಲ್ಲೊಂದು. ಸುದೀರ್ಘ ಅವಧಿಯ ಚಿತ್ರೀಕರಣದ ನಂತರ ಇದೀದ ಸಿನಿಮಾ ತೆರೆಗೆ ಸಿದ್ಧವಾಗುತ್ತಿದೆ. ಸಿನಿಮಾ ಎರಡು ಪಾರ್ಟ್‌ಗಳಲ್ಲಿ ತೆರೆಕಾಣಲಿದೆ ಎನ್ನುವ ಸುದ್ದಿ ಸಿಕ್ಕಿದ್ದು ಮೊನ್ನೆಯಷ್ಟೇ. ಇಂದು ಎರಡು ಪಾರ್ಟ್‌ಗಳ ಬಿಡುಗಡೆ ದಿನಾಂಕಗಳು ಘೋಷಣೆಯಾಗಿವೆ. ‘ಸೈಡ್‌ A’ ಸೆಪ್ಟೆಂಬರ್‌ 1ರಂದು ಮತ್ತು ‘ಸೈಡ್‌ B’ ಅಕ್ಟೋಬರ್‌ 20ರಂದು ಬಿಡುಗಡೆಯಾಗಲಿದೆ. ಪ್ರತ್ಯೇಕ ಪೋಸ್ಟರ್‌ಗಳ ಮೂಲಕ ಸಿನಿಮಾತಂಡ ಬಿಡುಗಡೆ ದಿನಾಂಕ ಘೋಷಿಸಿದ್ದು, ಮುಂದೆ ಪ್ರಚಾರ ಕೆಲಸಗಳು ಶುರುವಾಗಲಿವೆ.

ಪ್ರಮುಖ ಚಿತ್ರನಿರ್ಮಾಣ ಮತ್ತು ವಿತರಣೆ ಸಂಸ್ಥೆ KVN ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರ ಪಾತ್ರ ಎರಡು ಶೇಡ್‌ಗಳಲ್ಲಿರುತ್ತದೆ. ಎರಡು ಕಾಲಘಟ್ಟಗಳಲ್ಲಿ ಕಥೆ ನಡೆಯಲಿದೆ. ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ. ಎರಡೂ ಪಾರ್ಟ್‌ಗಳು ರಕ್ಷಿತ್‌ ಶೆಟ್ಟಿ ಅವರ ಪರಂವಃ ಪಿಕ್ಚರ್ಸ್ ಬ್ಯಾನರ್‌ನಡಿ ನಿರ್ಮಾಣವಾಗಿವೆ. ಹೇಮಂತ್ ರಾವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ. ಮುಂದಿನ ಕೆಲವು ದಿನಗಳಲ್ಲಿ ಟ್ರೈಲರ್‌ ಬಿಡುಗಡೆಯಾಗಲಿದೆ.

LEAVE A REPLY

Connect with

Please enter your comment!
Please enter your name here