ವಿಕಾಸ್‌ ಪುಷ್ಪಗಿರಿ ನಿರ್ದೇಶನದ ‘SCAM 1770’ ಸಿನಿಮಾ ನಾಳೆ (ಏಪ್ರಿಲ್‌ 12) ತೆರೆಕಾಣುತ್ತಿದೆ. ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಹೇಳುವ ಕತೆಯಿದು. ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರದ ಖ್ಯಾತಿಯ ರಂಜನ್ ಮತ್ತು ನಿಶ್ವಿತ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

‘ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ. ಸತ್ಯ ಘಟನೆಗಳನ್ನು ಕಟ್ಟಿಕೊಂಡು ವಾಸ್ತವದಲ್ಲಿ ಏನೇನೆಲ್ಲಾ ನಡೆಯುತ್ತಿದೆ ಎಂಬ ವಿಚಾರದೊಂದಿಗೆ ಮಾಡಿರುವ ಸಿನಿಮಾ. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು ನೋಡಲೇಬೇಕಾದ ಚಿತ್ರ’ ಎನ್ನುತ್ತಾರೆ ‘SCAM 1770’ ಚಿತ್ರದ ನಿರ್ದೇಶಕ ವಿಕಾಸ್‌ ಪುಷ್ಪಗಿರಿ. ಈ ಸಿನಿಮಾ ನಾಳೆ (ಏಪ್ರಿಲ್‌ 12) ತೆರೆಕಾಣುತ್ತಿದೆ. ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ನಿರ್ಮಿಸಿರುವ ಚಿತ್ರವಿದು. ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರದ ಖ್ಯಾತಿಯ ರಂಜನ್ ಮತ್ತು ನಿಶ್ವಿತ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಡಾ ಇಂದು ನಟೇಶ್ ಹಾಗೂ ಅಡ್ವೊಕೇಟ್ ನೇತ್ರಾವತಿ ಕತೆ ಬರೆದಿದ್ದು, ವಿಕಾಸ್ ಪುಷ್ಪಗಿರಿ ಹಾಗೂ ಶಂಕರ್ ರಾಮನ್ ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆ ಶಂಕರ್ ರಾಮನ್ ಅವರದು. ಸತೀಶ್ ಆರ್ಯನ್ ಸಂಗೀತ ನಿರ್ದೇಶನ, ಶೋಯೆಬ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಕಲೈ – ರಾಮು ನೃತ್ಯ ನಿರ್ದೇಶನ ಹಾಗೂ ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಬಿ ಸುರೇಶ್, ಅವಿನಾಶ್, ಶ್ರೀನಿವಾಸಪ್ರಭು, ರಮೇಶ್ ಪಂಡಿತ್, ರಾಘು ಶಿವಮೊಗ್ಗ, ನಾರಾಯಣ ಸ್ವಾಮಿ, ಉಗ್ರಂ ಸಂದೀಪ್, ಹರಿಣಿ, ಹಂಸ, ಸುನೇತ್ರ ಪಂಡಿತ್, ಶೃತಿ ನಾಯಕ್ ಚಿತ್ರದ ತಾರಾಬಳಗದಲ್ಲಿದ್ದಾರೆ.

LEAVE A REPLY

Connect with

Please enter your comment!
Please enter your name here