ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್‌ನಲ್ಲಿ ಬರುತ್ತಿರುವ ಚಿತ್ರ ಎಂದಮೇಲೆ ಸಿನಿಪ್ರಿಯರಿಗೆ ಒಂದು ಮಟ್ಟದ ನಿರೀಕ್ಷೆ ಇದ್ದೇ ಇರುತ್ತೆ. ಹೀಗಾಗಿ ‘ಛೂ ಮಂತರ್’ ಸಿನಿಮಾ ವೀಕ್ಷಕರಿಗೆ ಒಂದೊಳ್ಳೆ ಮನರಂಜನೆ ನೀಡಲಿದೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತೆ ಒಂದಾಗಿ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈ ಹಿಂದೆ ಶರಣ್ ಮತ್ತು ಚಿಕ್ಕಣ್ಣ ಜೋಡಿಯಾಗಿ ನಟಿಸಿದ್ದ ‘ಅಧ್ಯಕ್ಷ’ ಚಿತ್ರ ಜನರನ್ನು ರಂಜಿಸುವಲ್ಲಿ ಯಶಸ್ವಿಯಾಗಿತ್ತು. ನಂತರದಲ್ಲಿ ‘ರಾಜ್-ವಿಷ್ಣು’ ಸಿನಿಮಾದಲ್ಲೂ ಈ ಜೋಡಿ ಮೋಡಿ ಮಾಡಿತ್ತು. ಈಗ ಮತ್ತೊಮ್ಮೆ ಇದೇ ಕಾಮಿಡಿ ಜೋಡಿ ಹಾರರ್‌ ಕಾಮಿಡಿ ಸಿನಿಮಾ ‘ಛೂ ಮಂತರ್‌’ ಚಿತ್ರದಲ್ಲಿ ಒಟ್ಟಿಗೆ ರಂಜಿಸೋಕೆ ಸಿದ್ಧರಾಗಿದ್ದಾರೆ. ತಮ್ಮ ‌ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಶರಣ್ ಈ ಚಿತ್ರದ ನಾಯಕ. ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

ತರುಣ್ ಸ್ಟುಡಿಯೋಸ್ ಬ್ಯಾನರ್‌ ಅಡಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ‘ಛೂ ಮಂತರ್’ ಚಿತ್ರ ನಿರ್ಮಿಸಿದ್ದಾರೆ. ‘ಕರ್ವ’ ಖ್ಯಾತಿಯ ನವನೀತ್ ನಿರ್ದೇಶಿಸಿರುವ ‘ಛೂ‌ ಮಂತರ್’ ಸಿನಿಮಾ ಇದೇ ಮೇ 10ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್‌ಗಳ ಮೂಲಕ ಜನರ ಮನ ಗೆದ್ದಿದೆ. ಏಪ್ರಿಲ್ 19ಕ್ಕೆ ಚಿತ್ರದ ಟ್ರೇಲರ್ ರಿಲೀಸ್‌ ಆಗಲಿದೆ. ‘ಇದೊಂದು ಕಾಮಿಡಿ ಹಾರಾರ್ ಚಿತ್ರ.‌ ಕನ್ನಡದಲ್ಲಿ ಸಾಕಷ್ಟು ಹಾರಾರ್ ಚಿತ್ರಗಳು ಬಂದಿದೆಯಾದರೂ ಇದು ಸ್ವಲ್ಪ ವಿಭಿನ್ನವಾಗಿದೆ. ಈ ಸಿನಿಮಾದಲ್ಲಿ ಶರಣ್ ಅವರ ಪಾತ್ರ ಸಹ ಈ ಹಿಂದೆ ಅವರು ನಟಿಸಿರುವ ಚಿತ್ರಗಳಿಗಿಂತ ಬೇರೆ ರೀತಿಯಲ್ಲಿಯೇ ಇದೆ’ ಎನ್ನುತ್ತಾರೆ ನಿರ್ದೇಶಕರು. ಅನೂಪ್ ಕಟ್ಟುಕರನ್ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದು, ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ.

LEAVE A REPLY

Connect with

Please enter your comment!
Please enter your name here