ರಿಷಭ್‌ ಶೆಟ್ಟಿ ನಿರ್ಮಿಸಿ, ಜೈ ಶಂಕರ್‌ ಆರ್ಯರ್‌ ನಿರ್ದೇಶಿಸಿರುವ ‘ಶಿವಮ್ಮ’ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸಿನಿಮಾಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಥಿಯೇಟರ್‌ಗೆ ಬರಲಿದೆ.

ರಿಷಭ್‌ ಶೆಟ್ಟಿ ಫಿಲಂಸ್‌ ನಿರ್ಮಾಣದ ‘ಶಿವಮ್ಮ’ ಕನ್ನಡ ಸಿನಿಮಾ ಕಳೆದ ವರ್ಷದಿಂದ ಈವರೆಗೂ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹತ್ತಾರು ಪ್ರಶಸ್ತಿಗಳನ್ನು ಪಡೆದ ಸಿನಿಮಾ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ. ಜೈ ಶಂಕರ್‌ ಆರ್ಯರ್‌ ನಿರ್ದೇಶನದ ಸಿನಿಮಾವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದೆ. ಊರಿನ ಗ್ರಾಮಸ್ಥರೇ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ ಎನ್ನುವುದು ವಿಶೇಷ. ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿರುವ ಶಿವಮ್ಮನ ಕತೆಯೇ ಈ ಸಿನಿಮಾ. 46 ವರ್ಷದ ಶಿವಮ್ಮ ಪಾರ್ಶ್ವವಾಯು ಪೀಡಿತನಾದ ತನ್ನ ಪತಿ ಹಾಗೂ ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್‌ವರ್ಕ್‌ ಮಾರ್ಕೆಟಿಂಗ್ ವ್ಯಾಪಾರ ಮಾಡಿ ಬದುಕು ನಡೆಸುವ ಹೋರಾಟದ ಕಥಾನಕ.

ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022 ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗ್ರಾಂಡ್ ಪ್ರಿಕ್ಸ್ ಅಟ್ ಜೆರ್ಕೋಲೊ, ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ , ಸ್ವಿಟ್ಜರ್‌ಲ್ಯಾಂಡ್‌ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮ್ಯಾಜಿನ್‌ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡಾ ಇಂಡಿಯನ್ ಪಿಲ್ಮ್ ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್‌ಸ್ಕಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ‘ಶಿವಮ್ಮ’ ಸಿನಿಮಾ ಪ್ರದರ್ಶನಗೊಂಡು ಮೆಚ್ಚುಗೆ ಪಡೆದಿದೆ. ನಿನ್ನೆ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಥಿಯೇಟರ್‌ಗೆ ಬರುವ ಸೂಚನೆಯಿದೆ.

LEAVE A REPLY

Connect with

Please enter your comment!
Please enter your name here