ರಿಷಭ್‌ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ ಇರಾನ್‌ನ Fajr International Film Festivalನಲ್ಲಿ ಅತ್ಯುತ್ತಮ ನಿರ್ದೇಶನಕ್ಕೆ ಪ್ರಶಸ್ತಿ ಪಡೆದಿದೆ. ಜೈಶಂಕರ್‌ ಆರ್ಯರ್‌ ನಿರ್ದೇಶನದ ಸಿನಿಮಾ ಹತ್ತಾರು ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಗೌರವಕ್ಕೆ ಪಾತ್ರವಾಗಿದ್ದು, ನಿರ್ಮಾಪಕ ರಿಷಭ್‌ ಟ್ವಿಟರ್‌ನಲ್ಲಿ ಖುಷಿ ಹಂಚಿಕೊಂಡಿದ್ದಾರೆ.

ರಿಷಭ್‌ ಶೆಟ್ಟಿ films ಬ್ಯಾನರ್‌ನಡಿ ತಯಾರಾದ ‘ಶಿವಮ್ಮ’ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗಳನ್ನು ಪಡೆದಿದೆ. ಇದೀಗ ಚಿತ್ರಕ್ಕೆ ಇರಾನ್‌ನ Fajr International Film Festivalನಲ್ಲಿ ಅತ್ಯುತ್ತಮ ನಿರ್ದೇಶನಕ್ಕೆ ಪುರಸ್ಕಾರ ಸಿಕ್ಕಿದೆ. ಜೈಶಂಕರ್‌ ಆರ್ಯರ್‌ ನಿರ್ದೇಶನದ ಚಿತ್ರದಲ್ಲಿ ಗ್ರಾಮೀಣ ಮಹಿಳೆಯೊಬ್ಬರು ನೆಟ್‌ವರ್ಕ್‌ ಮಾರ್ಕೆಟಿಂಗ್‌ ಮಾಡುವ ಕಥಾವಸ್ತು ಹೊಂದಿದೆ. ಹೆಣ್ಣುಮಗಳ ಕತೆಯ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಆರ್ಥಿಕತೆ, ಗ್ರಾಮೀಣರ ಬದುಕಿನ ಕುರಿತು ಹೇಳಿದ್ದಾರೆ ನಿರ್ದೇಶಕ ಆರ್ಯರ್‌. 105 ನಿಮಿಷಗಳ ಚಿತ್ರವಿದು. ನಿರ್ಮಾಪಕ ರಿಷಭ್‌ ಶೆಟ್ಟಿ, ‘ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೆ ವಿದೇಶಿಗರ ಪ್ರೀತಿಗೂ ಪಾತ್ರವಾದ ನಮ್ಮ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಸಂಸ್ಥೆಯ ಹೆಮ್ಮೆಯ ‘ಶಿವಮ್ಮ’ ಚಿತ್ರ ತನ್ನ ಗೆಲುವಿನ ಪ್ರಯಾಣವನ್ನು ಮುಂದುವರಿಸಿದೆ. ಚಿತ್ರಕ್ಕೆ ನಿಮ್ಮ ಶುಭಹಾರೈಕೆಗಳಿರಲಿ’ ಎಂದು ಪ್ರಶಸ್ತಿಯ ಖುಷಿಯನ್ನು ಹಂಚಿಕೊಂಡಿದ್ದಾರೆ.

‘ಶಿವಮ್ಮ’ ಗೆದ್ದ ಪ್ರಶಸ್ತಿಗಳು : ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, 2022 ಯಂಗ್ ಜ್ಯೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022 ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್ ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ ,ಸ್ವಿಟ್ಜರ್‌ಲ್ಯಾಂಡ್‌ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡಾ ಇಂಡಿಯನ್ ಪಿಲ್ಮ್ ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್‌ಸ್ಕಿ ಅಂತರ್ರಾಷ್ಟ್ರೀಯ ಚಿತ್ರೋತ್ಸವ , ರಷ್ಯಾ.

LEAVE A REPLY

Connect with

Please enter your comment!
Please enter your name here