ಶಿವರಾಜಕುಮಾರ್‌ ಅಭಿನಯದ ‘ಭೈರಾಗಿ’ ಸಿನಿಮಾದ ಹೀರೋ ಇಂಟ್ರಡಕ್ಷನ್‌ ಸಾಂಗ್‌ನ ಲಿರಿಕಲ್‌ ವೀಡಿಯೊ ಬಿಡುಗಡೆಯಾಗಿದೆ. ವಿ.ನಾಗೇಂದ್ರಪ್ರಸಾದ್‌ ರಚನೆ, ಅನೂಪ್‌ ಸಿಳೀನ್‌ ಸಂಗೀತ ಸಂಯೋಜನೆಯ ಗೀತೆಯನ್ನು ಆ್ಯಂಥೋನಿ ದಾಸನ್ ಹಾಡಿದ್ದಾರೆ. ವಿಶಿಷ್ಟ ಸೌಂಡಿಂಗ್‌ ಮತ್ತು ಆಕರ್ಷಕ ಕೊರಿಯೋಗ್ರಫಿಯೊಂದಿಗೆ ಹಾಡು ಗಮನಸೆಳೆಯುತ್ತದೆ.

‘ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ…’ ಎಂಬ ‘ಭೈರಾಗಿ’ ಸಿನಿಮಾದ ಹಾಡು ಬಿಡುಗಡೆಯಾಗಿದೆ. ನಟ ದುನಿಯಾ ವಿಜಯ್‌ ಅವರು ಹಾಡು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. “ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ” ಎಂದಿದ್ದಾರೆ ವಿಜಯ್‌.

ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್’ವುಡ್ ‘ಭೀಮ’ ದುನಿಯಾ ವಿಜಯ್‌ ಅವರಿಂದ ಅನಾವರಣಗೊಳಿಸಿದೆ ಚಿತ್ರತಂಡ. ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಹಾಡಿಗೆ ಆ್ಯಂಥೋನಿ ದಾಸನ್ ದನಿತಯಾಗಿದ್ದಾರೆ.

“ನೂರಾರು ಡಾನ್ಸರ್ಸ್, ಬೃಹತ್ ಸೆಟ್, ಕಲರ್’ಫುಲ್ ಕಾಸ್ಟ್ಯೂಮ್’ನಲ್ಲಿ ಶಿವಣ್ಣಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡ ಮಟ್ಟದಲ್ಲಿ ಈ ಹಾಡು ಮೂಡಿಬಂದಿದೆ” ಎನ್ನುತ್ತಾರೆ ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್. ವಿಜಯ್ ಮಿಲ್ಟನ್‌ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಒದಗಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಚಿತ್ರಕ್ಕಿದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ‘ಬೈರಾಗಿ’ ನಿರ್ಮಿಸಿದ್ದಾರೆ.

LEAVE A REPLY

Connect with

Please enter your comment!
Please enter your name here