ಶ್ರೀನಿ ನಿರ್ದೇಶನದಲ್ಲಿ ಶಿವರಾಜಕುಮಾರ್‌ ಅಭಿನಯಿಸಿರುವ ‘ಘೋಸ್ಟ್‌’ ಸಿನಿಮಾ ಯಶಸ್ವಿಯಾಗಿ 25 ದಿನಗಳ ಪ್ರದರ್ಶನ ಪೂರೈಸಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲೂ ಸಿನಿಮಾ ತೆರೆಕಂಡಿತ್ತು. ಇದೀಗ ಸಿನಿಮಾದ OTT ಸ್ಟ್ರೀಮಿಂಗ್‌ ಡೇಟ್‌ ಹೊರಬಿದ್ದಿದೆ.

ಶಿವರಾಜಕುಮಾರ್‌ ಅಭಿನಯದ ‘ಘೋಸ್ಟ್‌’ ಸಿನಿಮಾ ಅಕ್ಟೋಬರ್‌ 19ರಂದು ತೆರೆಕಂಡಿತ್ತು. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲೂ ತೆರೆಕಂಡ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು, ಇದೀಗ ಸಿನಿಮಾ ಓಟಿಟಿಗೆ ಬರುತ್ತಿದೆ. ನವೆಂಬರ್‌ 17ರಿಂದ ZEE5ನಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದ ಸ್ಪೆಷಲ್‌ ಪ್ರೊಮೋ ಬಿಡುಗಡೆಯಾಗಿದೆ. ಇಲಿಯೊಂದು ಬಾಯಲ್ಲಿ ಚೀಟಿ ಹಿಡಿದು ಬಂದಿದೆ. ಅದನ್ನು ಅದು ಶಿವಣ್ಣನ ಕೈಗೆ ಇಟ್ಟಿದೆ. ಆ ಚೀಟಿಯ ಹಿಂಭಾಗದಲ್ಲಿ ಬೆಂಕಿ ಹಿಡಿದು ಶಿವರಾಜ್ ಕುಮಾರ್ ಅವರು ನೋಡಿದಾಗ ಅದರಲ್ಲಿ ಒಂದು ಮೆಸೇಜ್ ಕಂಡಿದೆ. ‘ಘೋಸ್ಟ್’ ಚಿತ್ರವನ್ನು ZEE5ನಲ್ಲಿ ನವೆಂಬರ್ 17ರಿಂದ ನೋಡಬಹುದು ಎನ್ನುವ ಮೆಸೇಜ್‌ ಅದು.

‘ಗ್ಯಾಂಗ್ ಅಲ್ಲಿ ಇರೋ Informer ಒಬ್ರು ನಿಮಗೆ ಒಂದು Messages ಕೊಟ್ಟಿದ್ದಾರೆ, ಏನು ಅಂತ ಗೊತ್ತಾಯ್ತು ಅಲ್ವಾ?’ ಎನ್ನುವ ಶೀರ್ಷಿಕೆ ಕೊಟ್ಟಿದ್ದು, ಇದು ವೈರಲ್ ಆಗಿದೆ. ಸಂದೇಶ್‌ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಸಿನಿಮಾ ನಿರೂಪಣೆಯಿಂದ ಗಮನ ಸೆಳೆದಿತ್ತು. ಎಂದಿನ ಸಿನಿಮಾ ಗ್ರಾಮರ್‌ ಹೊರತಾದ ಟ್ರೀಟ್‌ಮೆಂಟ್‌ ಪ್ರೇಕ್ಷಕರಿಗೂ ಇಷ್ಟವಾಗಿತ್ತು. ಚಿತ್ರದಲ್ಲಿ ಬಾಲಿವುಡ್‌ ನಟ ಅನುಪಮ್‌ ಖೇರ್‌, ಮಲಯಾಳಂ ನಟ ಜಯರಾಂ, ಪತ್ರಕರ್ತೆ ಪಾತ್ರದಲ್ಲಿ ಅರ್ಚನಾ ಜೋಯಿಸ್‌ ನಟಿಸಿದ್ದಾರೆ. ನಿರ್ದೇಶಕ ಶ್ರೀನಿ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಯಾಂಗ್ ಸ್ಟರ್ ಆಗಿ ಅಬ್ಬರಿಸಿರುವ ಶಿವಣ್ಣನ ಘೋಸ್ಟ್ ಸಿನಿಮಾವನ್ನು ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರು ಜೀ5 ಒಟಿಟಿಯಲ್ಲಿ‌ ನೋಡಬಹುದು.

LEAVE A REPLY

Connect with

Please enter your comment!
Please enter your name here