ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ’45’ ಸಿನಿಮಾಗೆ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಮೋಕೋಬೊಟ್, ರೋಪ್ ಕ್ಯಾಮೆರಾ ಸೇರಿದಂತೆ ಇನ್ನೂ ಹಲವು ದುಬಾರಿ ಸಲಕರಣೆಗಳ ಬಳಸಿ ಶೂಟ್ ಮಾಡುತ್ತಿರುವುದು ವಿಶೇಷ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ಚಿತ್ರವಿದು.
ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ’45’ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ. ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ ಇದು. ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣ ಅದ್ದೂರಿಯಾಗಿ ಸಾಗಿದೆ. ಇತ್ತೀಚೆಗೆ ಬನ್ನೇರುಘಟ್ಟದ ಶ್ರೀಚಂಪಕಧಾಮ ಸ್ವಾಮಿ ದೇವಸ್ಥಾನದ ಬಳಿ ಚಿತ್ರದ ಸನ್ನಿವೇಶವೊಂದರ ಚಿತ್ರೀಕರಣ ನಡೆದಿದೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ಅಲ್ಲಿ ಪಾಲ್ಗೊಂಡಿದ್ದರು. ಮೋಕೋಬೊಟ್, ರೋಪ್ ಕ್ಯಾಮೆರಾ ಸೇರಿದಂತೆ ಇನ್ನೂ ಹಲವು ದುಬಾರಿ ಸಲಕರಣೆಗಳ ಬಳಸಿ ಈ ದೃಶ್ಯವನ್ನು ಚಿತ್ರಿಸಲಾಗಿದೆ.
ಸನ್ನಿವೇಶವೊಂದಕ್ಕೆ 418ಕ್ಕೂ ಹೆಚ್ಚು ಕಲರ್ ಬಾಂಬ್‌ಗಳನ್ನು ಬಳಸಿರುವುದು ಕನ್ನಡದಲ್ಲಿ ಇದೇ ಮೊದಲು. ಈ ಅದ್ಧೂರಿ ಸನ್ನಿವೇಶಕ್ಕೆ ಭಾರತ ಚಿತ್ರರಂಗದ ಜನಪ್ರಿಯ ನೃತ್ಯ ನಿರ್ದೇಶಕ ಚಿನ್ನಿಪ್ರಕಾಶ್ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ ಸಿನಿಮಾಗಿದೆ. ‘ಗಾಳಿಪಟ 2’ ಸೇರಿದಂತೆ ಅನೇಕ ಸಿನಿಮಾಗಳನ್ನು ನಿರ್ಮಿಸಿರುವ Suraj Production ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ಅವರು ಮೊದಲ ಬಾರಿಗೆ ಸಿನಿಮಾ ನಿರ್ದೇಶಿಸುತ್ತಿದ್ದು, ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.