ಸಂತೋಷ್‌ ಗೋಪಾಲ್‌ ನಿರ್ದೇಶನದಲ್ಲಿ ಸಿದ್ಧವಾಗಿರುವ ‘ಶುಭಮಂಗಳ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್‌, ಸೆಂಟಿಮೆಂಟ್‌ ಸಿನಿಮಾದ ವಸ್ತು.

ಪುಟ್ಟಣ್ಣ ಕಣಗಾಲ್‌ ನಿರ್ದೇಶನದಲ್ಲಿ ತೆರೆಕಂಡ ‘ಶುಭಮಂಗಳ’ ಕನ್ನಡದ ಮಹತ್ವದ ಚಿತ್ರಗಳಲ್ಲೊಂದು. ಇದೇ ಶೀರ್ಷಿಕೆಯಡಿ ಸಂತೋಷ್‌ ಗೋಪಾಲ್‌ ಚಿತ್ರವೊಂದನ್ನು ಸಿದ್ಧಪಡಿಸಿದ್ದಾರೆ. ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಹಿಂದೆ ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರಗಳನ್ನು ರೂಪಿಸಿರುವ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಸಿನಿಮಾದಲ್ಲಿ ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಇದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದ್ದು, ಸಿದ್ಧಾರ್ಥ್‌ ಮಾಧ್ಯಮಿಕ, ಮೇಘನಾ ಗಾಂವ್ಕರ್‌, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಸೇರಿದಂತೆ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹೊಸ್ತಿಲಲ್ಲಿರುವ ಶುಭಮಂಗಳ ಸಿನಿಮಾದಲ್ಲಿ ಐದು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದಾರೆ. ರಾಕೇಶ್ ಬಿ. ರಾಜ್ ಛಾಯಾಗ್ರಹಣವಿದೆ. ನಿರ್ದೇಶಕ ಸಂತೋಷ್‌ ಅವರೇ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ತಮ್ಮದೇ ಅವ್ಯಕ್ತ ಬ್ಯಾನರ್‌ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ನಿರ್ಮಿಸಿದ್ದಾರೆ.

LEAVE A REPLY

Connect with

Please enter your comment!
Please enter your name here