ಸಾಗರ್‌ ಅಂಬ್ರೆ ಮತ್ತು ಪುಷ್ಕರ್‌ ಓಜಾ ನಿರ್ದೇಶನದ ‘ಯೋಧ’ ಹಿಂದಿ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಸಿದ್ದಾರ್ಥ್‌ ಮಲ್ಹೋತ್ರಾ ಶೀರ್ಷಿಕೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ದಿಶಾ ಪಟಾನಿ ಮತ್ತು ರಾಶಿ ಖನ್ನಾ ಚಿತ್ರದ ಇಬ್ಬರು ನಾಯಕಿಯರು. ಮಾರ್ಚ್‌ 15ರಂದು ಸಿನಿಮಾ ತೆರೆಗೆ ಬರಲಿದೆ.

ಸಿದ್ಧಾರ್ಥ್ ಮಲ್ಹೋತ್ರಾ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಆಕ್ಷನ್‌ ಥ್ರಿಲ್ಲರ್‌ ‘ಯೋಧ’ ಹಿಂದಿ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಈ ಸಿನಿಮಾವನ್ನು ಸಾಗರ್ ಅಂಬ್ರೆ ಮತ್ತು ಪುಷ್ಕರ್ ಓಜಾ ನಿರ್ದೇಶಿಸಿದ್ದಾರೆ. ಟೀಸರ್‌ನಲ್ಲಿ ಏರ್‌ ಇಂಡಿಯಾ ವಿಮಾನವನ್ನು ಆಕ್ರಮಿಸಿಕೊಂಡು ದಾಳಿ ಮಾಡಿರುವ ಭಯೋತ್ಪಾದಕರಿಂದ ಪ್ರಯಾಣಿಕರನ್ನು ರಕ್ಷಿಸುತ್ತಿರುವ ಯೋಧನಾಗಿ ಸಿದ್ಧಾರ್ಥ್‌ ಕಾಣಿಸಿಕೊಂಡಿದ್ದಾರೆ. ದಿಶಾ ಪಟಾನಿ ಮತ್ತು ರಾಶಿ ಖನ್ನಾ ಚಿತ್ರದ ಇಬ್ಬರು ನಾಯಕಿಯರು. ಸಿನಿಮಾ ಮಾರ್ಚ್ 15ರಂದು ಬಿಡುಗಡೆಯಾಗಲಿದೆ. Dharma Productions ಬ್ಯಾನರ್‌ ಅಡಿಯಲ್ಲಿ ಹಿರೂ ಯಶ್ ಜೋಹರ್, ಕರಣ್ ಜೋಹರ್, ಅಪೂರ್ವ ಮೆಹ್ತಾ ಮತ್ತು ಶಶಾಂಕ್ ಖೈತಾನ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಹಿಂದೆ ಸಿದ್ಧಾರ್ಥ್ ಮಲ್ಹೋತ್ರಾ ಅವರು Dharma Productions ನಿರ್ಮಾಣದಲ್ಲಿ ‘ಸ್ಟೂಡೆಂಟ್ ಆಫ್ ದಿ ಇಯರ್’, ‘ಹಸೀ ತೋ ಫಸೀ’, ‘ಕಪೂರ್ ಆಂಡ್ ಸನ್ಸ್’ ಮತ್ತು ‘ಶೇರ್ ಷಾ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ರೋಹಿತ್‌ ಶೆಟ್ಟಿ ನಿರ್ದೇಶನದ ‘ಇಂಡಿಯನ್‌ ಪೊಲೀಸ್‌ ಫೋರ್ಸ್‌’ ವೆಬ್‌ ಸರಣಿಯಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

LEAVE A REPLY

Connect with

Please enter your comment!
Please enter your name here