ಮಹೇಶ್‌ ಬಾಬು ನಿರ್ದೇಶನದಲ್ಲಿ smile guru ರಕ್ಷಿತ್‌ ನಟಿಸುತ್ತಿರುವ ನೂತನ ಸಿನಿಮಾಗೆ ಚಾಲನೆ ಸಿಕ್ಕಿದೆ. ನಟ ಪ್ರೇಮ್‌ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ‘ವೀರ ಮದಕರಿ’ ಚಿತ್ರದಲ್ಲಿ ಬಾಲನಟಿಯಾಗಿದ್ದ ಜೆರುಶಾ ಈ ಚಿತ್ರದ ನಾಯಕಿ.

‘ಆಕಾಶ್’, ‘ಅರಸು’, ‘ಮೆರವಣಿಗೆ’ ಸೇರಿದಂತೆ ಹಲವು ಯಶಸ್ವೀ ಸಿನಿಮಾಗಳ ನಿರ್ದೇಶಕ ಮಹೇಶ್‌ ಬಾಬು ಅವರ ನೂತನ ಸಿನಿಮಾ ಸೆಟ್ಟೇರಿದೆ. smile guru ರಕ್ಷಿತ್‌ ಈ ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ನಿನ್ನೆ ಸಿನಿಮಾ ಸೆಟ್ಟೇರಿದ್ದು, ನಟ ಪ್ರೇಮ್‌ ಮೊದಲ ದೃಶ್ಯಕ್ಕೆ ಕ್ಲ್ಯಾಪ್‌ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಸುದೀಪ್‌ ನಟನೆಯ ‘ವೀರ ಮದಕರಿ’ ಚಿತ್ರದಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ಈ ಸಿನಿಮಾ ಮೂಲಕ ನಾಯಕಿಯಾಗಿ ಬಡ್ತಿ ಪಡೆದಿದ್ದಾರೆ. ಇವರ ಹೊರತಾಗಿ ಚಿತ್ರದಲ್ಲಿ ಮತ್ತೊಬ್ಬ ನಾಯಕಿಯೂ ಇರಲಿದ್ದಾರೆ. ಎರಡನೇ ನಾಯಕಿಯ ಕುರಿತು ಸದ್ಯದಲ್ಲೆ ಚಿತ್ರತಂಡ ಮಾಹಿತಿ ನೀಡಿಲಿದೆ.

ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲಂಸ್‌ ಈ ಚಿತ್ರ ನಿರ್ಮಾಣ ಮಾಡುತ್ತಿದೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಸತ್ಯ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕತೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ಮುಗಿಸಲಿರುವ ಚಿತ್ರತಂಡ ಎರಡನೇ ಹಂತದ ಶೂಟಿಂಗ್‌ಗಾಗಿ ಮಲೆನಾಡಿಗೆ ಹೊರಡಲಿದೆ.

LEAVE A REPLY

Connect with

Please enter your comment!
Please enter your name here