ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 2021 ಮತ್ತು 2022ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜನವರಿ 25ರಂದು ಆಯೋಜನೆಗೊಂಡಿದೆ. ಚಿತ್ರರಂಗದ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದು, 11 ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಕಳೆದ 47 ವರ್ಷಗಳಿಂದ ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ಎನ್ನುವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದಿವಂಗತ ಡಿ.ವಿ.ಸುಧೀಂದ್ರ ಅವರಿಂದ ಸ್ಥಾಪಿಸಲ್ಪಟ್ಟ ಸಂಸ್ಥೆಯಿದು. ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ ಸುಧೀಂದ್ರ ಅವರು ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಆರಂಭಿಸಿದ್ದರು. ರಾಘವೇಂದ್ರ ಚಿತ್ರವಾಣಿಯ ಎರಡು ಪ್ರಶಸ್ತಿಗಳ ಜೊತೆಗೆ ಗಣ್ಯರು ಈ ಸಂಸ್ಥೆಯ ಮೂಲಕ ತಾವೂ ಪ್ರಶಸ್ತಿ ಪ್ರದಾನ ಮಾಡಲು ಮುಂದಾದರು. ಹೀಗೆ ಆರಂಭವಾದ ಈ ಪ್ರಶಸ್ತಿ ಪ್ರದಾನ ಸಮಾರಂಭ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ. ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೆ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ.

ಕಳೆದ ವರ್ಷ ಕೋವಿಡ್​ ಕಾರಣದಿಂದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜನೆಗೊಂಡಿರಲಿಲ್ಲ. ಹಾಗಾಗಿ, ಕಳೆದ ವರ್ಷದ ಶ್ರೀ ರಾಘವೇಂದ್ರ ಚಿತ್ತವಾಣಿ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತಿದೆ. ಸಂಸ್ಥೆಯ ಸ್ಥಾಪಕರಾದ ಡಿ.ವಿ. ಸುಧೀಂದ್ರ ಅವರ ಜನ್ಮದಿನದಂದು (ಜನವರಿ 25), ಈ ಸಮಾರಂಭವನ್ನು ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಸಂಜೆ 5ಕ್ಕೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಹಾಗೂ 21 ಮತ್ತು 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್​, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್​ ಬಣಕಾರ್​, ನಟಿಯರಾದ ರಾಗಿಣಿ, ಚಾಂದಿನಿ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

2021 ಮತ್ತು 2022ನೇ ವಾರ್ಷಿಕ ಪ್ರಶಸ್ತಿಗಳ ವಿವರ

2021
ಪಿ. ಧನರಾಜ್
ಹಿರಿಯ ಚಲನಚಿತ್ರ ನಿರ್ಮಾಪಕರು
ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಶ್ರೀ ಈಶ್ಚರ ದೈತೋಟ
ಹಿರಿಯ ಪತ್ರಕರ್ತರು
ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

2022
ಕುಮಾರ್ ಗೋವಿಂದ್
ಹಿರಿಯ ನಟ-ನಿರ್ಮಾಪಕರು
ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಸದಾಶಿವ ಶೆಣೈ
ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು
ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ರಾಜೇಶ್ ಕೃಷ್ಣನ್
ಖ್ಯಾತ ಹಿನ್ನೆಲೆ ಗಾಯಕರು
ಡಾ.ರಾಜಕುಮಾರ್ ಪ್ರಶಸ್ತಿ, ರಾಜಕುಮಾರ್ ಕುಟುಂಬದವರಿಂದ

ಸಾಯಿಪ್ರಕಾಶ್
ಹಿರಿಯ ನಿರ್ದೇಶಕರು-ನಿರ್ಮಾಪಕರು
‘ಯಜಮಾನ’ ಚಿತ್ರದ ಖ್ಯಾತಿಯ ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ ಭಾರತಿ ವಿಷ್ಣುವರ್ಧನ್​ ಅವರಿಂದ

ತುಳಸಿ
ಹಿರಿಯ ನಟಿ
ಖ್ಯಾತ ಅಭಿನೇತ್ರಿ ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ

ನೋಬಿನ್ ಪಾಲ್
ಅತ್ಯುತ್ತಮ ಸಂಗೀತ ನಿರ್ದೇಶನ, ‘777 ಚಾರ್ಲಿ’ ಚಿತ್ರಕ್ಕಾಗಿ
ಎಂ.ಎಸ್.ರಾಮಯ್ಯ ಮೀಡಿಯಾ ಅಂಡ್ ಎಂಟರ್​ಟೈನ್​ಮೆಂಟ್​ ಪ್ರೈ ಲಿ ಪ್ರಶಸ್ತಿ

ಮಧುಚಂದ್ರ
ಅತ್ಯುತ್ತಮ ಕಥಾಲೇಖಕರು, ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರಕ್ಕಾಗಿ
ಖ್ಯಾತ ನಿರ್ದೇಶಕ-ನಿರ್ಮಾಪಕ ಕೆ.ವಿ. ಜಯರಾಂ ಪ್ರಶಸ್ತಿ, ಮೀನಾಕ್ಷಿ ಜಯರಾಂ ಅವರಿಂದ

ಎಂ.ಜಿ. ಶ್ರೀನಿವಾಸ್ (ಶ್ರೀನಿ)
ಅತ್ಯುತ್ತಮ ಸಂಭಾಷಣೆ, ‘ಓಲ್ಡ್ ಮಾಂಕ್’ ಚಿತ್ರಕ್ಕಾಗಿ
ಖ್ಯಾತ ಚಿತ್ರಸಾಹಿತಿ ಶ್ರೀ ಹುಣಸೂರು ಕೃಷ್ಣಮೂರ್ತಿ ಸ್ಮರಣಾರ್ಥ ಪ್ರಶಸ್ತಿ,
ಡಾ.ಎಚ್​.ಕೆ.ನರಹರಿ ಅವರಿಂದ

ಕಿರಣ್ ರಾಜ್ (‘777 ಚಾರ್ಲಿ’)
ಚೊಚ್ಚಲ ಚಿತ್ರದ ನಿರ್ದೇಶನಕ್ಕಾಗಿ
ಹಿರಿತೆರೆ-ಕಿರುತೆರೆ ನಿರ್ದೇಶಕ ಬಿ. ಸುರೇಶ ಪ್ರಶಸ್ತಿ

ಶ್ರೀ ಪ್ರಮೋದ್ ಮರವಂತೆ
‘ಕಾಂತಾರ’ ಚಿತ್ರದ ‘ಸಿಂಗಾರ ಸಿರಿಯೇ …’ ಗೀತರಚನೆಗಾಗಿ
ಹಿರಿಯ ಪತ್ರಕರ್ತರಾದ ಪಿ.ಜಿ. ಶ್ರೀನಿವಾಸಮೂರ್ತಿ ಅವರ ಸ್ಮರಣಾರ್ಥ ಪ್ರಶಸ್ತಿ ವಿನಾಯಕರಾಮ್ ಕಲಗಾರು ಅವರಿಂದ

ಶ್ರೀನಿವಾಸಮೂರ್ತಿ
ಹಿರಿಯ ಪೋಷಕ ಕಲಾವಿದರು
ಹಿರಿಯ ಪತ್ರಕರ್ತ ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ, ನಾಗಮಣಿ ಸೀತಾರಾಮ ಕುಟುಂಬದವರಿಂದ

LEAVE A REPLY

Connect with

Please enter your comment!
Please enter your name here