ಸೃಜನ್‌ ಲೋಕೇಶ್‌ ಚೊಚ್ಚಲ ನಿರ್ದೇಶನದ ‘GST’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಸಂದೇಶ್‌ ನಾಗರಾಜ್‌ ನಿರ್ಮಾಣದ ಚಿತ್ರವಿದು. ನಿರ್ದೇಶನದ ಜೊತೆ ಸೃಜನ್‌ ಚಿತ್ರದ ನಾಯಕನಟನಾಗಿಯೂ ಅಭಿನಯಿಸಿದ್ದಾರೆ. ರಜನಿ ಭಾರದ್ವಾಜ್‌ ಚಿತ್ರದ ನಾಯಕಿ.

ಹಲವು ಯಶಸ್ವೀ ಸಿನಿಮಾಗಳನ್ನು ನಿರ್ಮಿಸಿರುವ ಸಂದೇಶ್‌ ನಾಗರಾಜ್‌ ನಿಮಾಣದ ‘GST’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಇದೊಂದು ಹಾರರ್‌ – ಕಾಮಿಡಿ ಜಾನರ್‌ ಸಿನಿಮಾ. ಸೃಜನ್‌ ಹೀರೋ ನಟಿಸುತ್ತಿರುವುದಲ್ಲದೆ ಮೊದಲ ಬಾರಿಗೆ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಕಬಿನಿ ಬಳಿಯ ಸಂದೇಶ್ ಅವರ ಹೊಸ ರೆಸಾರ್ಟ್‌ನಲ್ಲಿ ನಾಯಕ ಸೃಜನ್ ಹಾಗೂ ನಾಯಕಿ ರಜನಿ ಭಾರದ್ವಾಜ್ ನಟಿಸಿದ ಹಾಡೊಂದರ ಚಿತ್ರೀಕರಣ ಹಾಗೂ ಮೈಸೂರಿನಲ್ಲಿ ಸೃಜನ್ ಲೋಕೇಶ್, ಸಂಹಿತ ವಿನ್ಯ, ತಬಲನಾಣಿ, ಗಿರೀಶ್ ಶಿವಣ್ಣ, ವಿನೋದ್ ಗೊಬ್ಬರಗಾಲ ಮುಂತಾದವರು ಅಭಿನಯಿಸಿದ ಮತ್ತೊಂದು ಹಾಡಿನ ಚಿತ್ರೀಕರಣ ನಡೆದಿದೆ. ಸೃಜನ್ ಲೋಕೇಶ್ ಮತ್ತು ಚಂದನ್ ಶೆಟ್ಟಿ ರಚನೆಯ ಹಾಡುಗಳಿಗೆ ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಎರಡು ಹಾಡುಗಳ ಚಿತ್ರೀಕರಣದೊಂದಿಗೆ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ.

ಚಿತ್ರದ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿರುವುದು ವಿಶೇಷ. ಅವರ ಪಾತ್ರ ೇನು ಎನ್ನುವುದನ್ನು ಸೃಜನ್‌ ಬಿಟ್ಟುಕೊಟ್ಟಿಲ್ಲ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂವರೂ ಒಟ್ಟಿಗೆ ಅಭಿನಯಿಸಿದ್ದಾರೆ. ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದಾಗಿದೆ. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನನ್ನು ನಿರ್ದೇಶಿಸಿದ್ದಾರೆ! ಮನೋರಂಜನೆಯೇ ಪ್ರಧಾನವಾಗಿರುವ “GST” ಚಿತ್ರಕ್ಕೆ ‘ಘೋಸ್ಟ್ ಇನ್ ಟ್ರಬಲ್’ ಅಡಿಬರಹವಿದೆ. ಪ್ರಮೋದ್ ಶೆಟ್ಟಿ, ಶೋಭರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ, ಗುಂಡ್ಲುಪೇಟೆ ಸುರೇಶ್ ಛಾಯಾಗ್ರಹಣ, ರಾಜಶೇಖರ್ ಸಂಭಾಷಣೆ ಚಿತ್ರಕ್ಕಿದೆ.

LEAVE A REPLY

Connect with

Please enter your comment!
Please enter your name here