ನಟ ಸುದೀಪ್‌ ಅಭಿಮಾನಿಗಳು ಹಲವು ವರ್ಷಗಳಿಂದ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಈ ಆಂಬುಲೆನ್ಸ್ ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.

ನಟ ಸುದೀಪ್‌ ತಮ್ಮ ಚಾರಿಟಬಲ್‌ ಟ್ರಸ್ಟ್‌ ಮೂಲಕ ಸಾಕಷ್ಟು ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಸುದೀಪ್‌ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ. ವರ್ಷಗಳ ಹಿಂದೆ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಈ ಆಂಬುಲೆನ್ಸ್ ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.

ಅಂದಹಾಗೇ ‘ಮ್ಯಾಕ್ಸ್’ ಕಿಚ್ಚ ನಟನೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು. ಚಿತ್ರದ ಫಸ್ಟ್‌ ಗ್ಲಿಂಪ್ಸ್ ಈಗಾಗಲೇ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸುದೀಪ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಕಾಲಿವುಡ್‌ನ ಖ್ಯಾತ ಡೈರೆಕ್ಟರ್‌ ವಿಜಯ್ ಕಾರ್ತಿಕೇಯ ನಿರ್ದೇಶನದ ಚಿತ್ರವಿದು. ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡು, ಕಾಮರಾಜ್, ಸುಕೃತಾ ವಾಗ್ಲೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥನು ಚಿತ್ರ ನಿರ್ಮಿಸುತ್ತಿದ್ದಾರೆ.

LEAVE A REPLY

Connect with

Please enter your comment!
Please enter your name here